ಪುತ್ತೂರು: ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಆರೋಪದಲ್ಲಿ ಲೋಕಾಯುಕ್ತ ಪೊಲೀಸರಿಂದ ಬಂಧಿತರಾಗಿರುವ ಕೆ ಆರ್ ಪುರಂ ನ ಹಿಂದಿನ ತಹಶೀಲ್ದಾರ್, ಪುತ್ತೂರು ಸೊರಕೆ ಮೂಲದ ಅಜಿತ್ ಕುಮಾರ್ ರೈ ಅವರನ್ನು ಸರಕಾರಿ ಸೇವೆಯಿಂದ ಅಮಾನತ್ತು ಗೊಳಿಸಿ ಕಂದಾಯ ಇಲಾಖೆ ಸರಕಾರದ ಉಪ ಕಾರ್ಯದರ್ಶಿ ಆದೇಶ ಹೊರಡಿಸಿದ್ದಾರೆ ಎಂದು ತಿಳಿದು ಬಂದಿದೆ.