ಕರಾವಳಿ ಜಿಲ್ಲೆಗಳಲ್ಲಿ ಕೆಲವೇ ಗಂಟೆಗಳಲ್ಲಿ ಸುರಿಯಲಿದೆ ಭಾರೀ ಮಳೆ
ಈ ಬಾರಿ ಮುಂಗಾರು ತಡವಾಗಿ ಬಂದರೂ ಇದೀಗ ಭರ್ಜರಿ ಮಳೆಯಾಗುತ್ತಿದೆ. ಕರ್ನಾಟಕದ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದಲ್ಲಿ ಮುಂದಿನ ಕೆಲವೇ ಗಂಟೆಗಳಲ್ಲಿ ಧಾರಾಕಾರ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ರೆಡ್ ಅಲರ್ಟ್ ಘೋಷಿಸಲಾಗಿದೆ.

ಜುಲೈ 9ರವರೆಗೂ ಭಾರಿ ಮಳೆಯಾಗುವ ನಿರೀಕ್ಷೆ ಇದೆ. ಜುಲೈ 6 ರಂದು ಆರೆಂಜ್ ಅಲರ್ಟ್ ಜುಲೈ 8 ಹಾಗೂ 9 ರಂದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಇನ್ನು ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ಕಲಬುರಗಿ, ರಾಯಚೂರಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಬೆಂಗಳೂರು ಗ್ರಾಮಾಂತರದಲ್ಲಿ ಭಾರಿ ಮಳೆಯಾಗಲಿದೆ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗುಮ ಮೈಸೂರು, ಶಿವಮೊಗ್ಗ, ತುಮಕೂರು ಜಿಲ್ಲೆಗಳಲ್ಲಿ ಅಧಿಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.