ರಾಜಕೀಯರಾಜ್ಯ

ಬಿಜೆಪಿ ರಾಜ್ಯಾಧ್ಯಕ್ಷ, ವಿಪಕ್ಷ ನಾಯಕನ ಹೆಸರು ಇಂದೇ ಘೋಷಣೆ ಸಾಧ್ಯತೆ-ಯಡಿಯೂರಪ್ಪ



ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ವಿಪಕ್ಷ ನಾಯಕನ ಹೆಸರು ಇಂದೇ ಘೋಷಣೆಯಾಗುವ ಸಾಧ್ಯತೆ ಇದೆ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.

ವಿಪಕ್ಷ ನಾಯಕ, ರಾಜ್ಯಾಧ್ಯಕ್ಷ ಯಾರಾಗಬೇಕೆಂದು ಕೇಂದ್ರದ ನಾಯಕರು ಬಂದು ಅಭಿಪ್ರಾಯ ತೆಗೆದುಕೊಂಡು ಹೋಗಿದ್ದಾರೆ. ಬಹುಶಃ ಇವತ್ತು ಅಮಿತ್ ಷಾ, ಪ್ರಧಾನಿ ಮೋದಿ ಅವರ ಜೊತೆ ಚರ್ಚೆ ನಡೆಸಿ ತೀರ್ಮಾನಕ್ಕೆ ಬರಬಹುದು ಎಂದು ಭಾವಿಸಿದ್ದೇವೆ. ಏನು ತೀರ್ಮಾನ ತೆಗೆದುಕೊಳ್ಳುತ್ತಾರೆ ನೋಡೋಣ. ಅವರ ತೀರ್ಮಾನವನ್ನು ಸ್ವಾಗತಿಸುತ್ತೇವೆ ಎಂದು ಯಡಿಯೂರಪ್ಪ ಹೇಳಿದ್ದಾರೆ.

Leave a Reply

Your email address will not be published. Required fields are marked *

error: Content is protected !!