ಬೆಂಗಳೂರು: ಶಿವಾಜಿನಗರದ ಮಸೀದಿಗೆ ಹುಸಿ ಬಾಂಬ್ ಬೆದರಿಕೆ ಕರೆ
ಬೆಂಗಳೂರಿನ ಶಿವಾಜಿನಗರದ ಆಜಾಂ ಮಸೀದಿಗೆ ಬಾಂಬ್ ಬೆದರಿಕೆ ಕರೆ ಬಂದಿದೆ. ಮಸೀದಿಗೆ ಬಾಂಬ್ ಇಟ್ಟಿದ್ದಾರೆಂದು ರಾತ್ರಿ ಗಂಟೆ 11ಕ್ಕೆ ಅಪರಿಚಿತನೊಬ್ಬ ಪೊಲೀಸ್ ಸಹಾಯವಾಣಿ ಸಂಖ್ಯೆ 112ಕ್ಕೆ ಕರೆ ಮಾಡಿ ತಿಳಿಸಿದ್ದಾನೆ.
ಉಗ್ರರು ಬಾಂಬ್ ಇಟ್ಟಿದ್ದಾರೆಂದು ಅಪರಿಚಿತ ವ್ಯಕ್ತಿ ಕರೆ ಮಾಡಿದ್ದು ಮಾಹಿತಿ ತಿಳಿದು ಸ್ಥಳಕ್ಕೆ ಶಿವಾಜಿನಗರ ಪೊಲೀಸರು ದೌಡಾಯಿಸಿದ್ದಾರೆ. ಹಿರಿಯ ಅಧಿಕಾರಿಗಳು ಸಹಿತ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮಸೀದಿ ಪರಿಶೀಲನೆ ಬಳಿಕ ಹುಸಿ ಬಾಂಬ್ ಕರೆ ಎಂದು ತಿಳಿದು ನಿಟ್ಟುಸಿರು ಬಿಟ್ಟಿದ್ದಾರೆ. ಕರೆ ಮಾಡಿದ ವ್ಯಕ್ತಿಗಾಗಿ ಶಿವಾಜಿನಗರ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.



