ಬೆಳ್ತಂಗಡಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗೆ ಸೋಲು: ಮೂವರು ಪ್ರಮುಖ ನಾಯಕರಿಗೆ ಕೆಪಿಸಿಸಿಯಿಂದ ನೋಟಿಸ್ ಜಾರಿ
ಬೆಳ್ತಂಗಡಿ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯ ಸೋಲಿಗೆ ಕಾರಣವಾಗಿರುವ ಬಗ್ಗೆ ಬೆಳ್ತಂಗಡಿಯ ಮೂವರು ಕಾಂಗ್ರೆಸ್ ಮುಖಂಡರಿಗೆ ಕೆಪಿಸಿಸಿಯಿಂದ ಅಂತರಿಕ ತನಿಖೆ ನಡೆಸಲು ಕೆಪಿಸಿಸಿ ಕಚೇರಿಗೆ ಹಾಜರಾಗಲು ನೋಟಿಸ್ ಜಾರಿಯಾಗಿರುವ ಬಗ್ಗೆ ವರದಿಯಾಗಿದೆ.

ಬೆಳ್ತಂಗಡಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯ ಪರವಾಗಿ ಬಹಿರಂಗ ಪ್ರಚಾರ ಮಾಡದೆ ಪಕ್ಷದ ವಿರುದ್ಧವೇ ಪ್ರಚಾರ ನಡೆಸಿ ಪಕ್ಷದ ಅಭ್ಯರ್ಥಿ ಸೋಲಲು ಕಾರಣರಾಗಿದ್ದೀರಿ ಎಂದು ಕೆಪಿಸಿಸಿ ಕಚೇರಿಗೆ ಲಿಖಿತ ದೂರು ಬಂದಿದ್ದು. ಈ ಬಗ್ಗೆ ವಿವರಣೆ ಪಡೆಯಲು ಕೆಪಿಸಿಸಿ ಉಪಾಧ್ಯಕ್ಷ ಗಂಗಾಧರ ಗೌಡ, ಬೆಳ್ತಂಗಡಿ ಗ್ರಾಮೀಣ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ರಂಜನ್ ಗೌಡ, ಬೆಳ್ತಂಗಡಿ ನಗರ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಶೈಲೇಶ್ ಕುಮಾರ್ ಅವರಿಗೆ ಕಾಂಗ್ರೆಸ್ ಪಕ್ಷದ ಕೆಪಿಸಿಸಿ ಶಿಸ್ತು ಕ್ರಮ ಕಮಿಟಿಯ ಅಧ್ಯಕ್ಷ ಕೆ.ರಹಮಾನ್ ಖಾನ್ ಪತ್ರ ತಲುಪಿದ 7 ದಿನದೊಳಗಾಗಿ ಅಂದರೆ ಜುಲೈ 8 ರಂದು ಬೆಂಗಳೂರು ಕೆಪಿಸಿಸಿ ಕಚೇರಿಗೆ ಹಾಜರಾಗಲು ನೋಟಿಸ್ ಜಾರಿ ಮಾಡಿದ್ದಾರೆ.
ಇತ್ತೀಚೆಗೆ ಸುಳ್ಯದಲ್ಲೂ ಕಾಂಗ್ರೆಸ್ ಅಭ್ಯರ್ಥಿ ಸೋತಿರುವ ಹಿನ್ನೆಲೆಯಲ್ಲಿ ಹಲವು ಮುಖಂಡರಿಗೆ ಕೆಪಿಸಿಸಿಶಿಸ್ತು ಸಮಿತಿಯಿಂದ ನೋಟಿಸ್ ಜಾರಿಗೊಳಿಸಲಾಗಿತ್ತು. ಅಲ್ಲದೆ ಕೆಲವರನ್ನು ಅಮಾನತು ಕೂಡ ಮಾಡಲಾಗಿತ್ತು