ಬಂಟ್ವಾಳ: ನಂದಾವರದಲ್ಲಿ ಮನೆ ಮೇಲೆ ಗುಡ್ಡ ಕುಸಿತ- ಮಹಿಳೆ ಮೃತ್ಯು; ಯುವತಿಯ ರಕ್ಷಣೆ
ಮನೆಯೊಂದರ ಮೇಲೆ ಗುಡ್ಡ ಕುಸಿದು ಬಿದ್ದು ಮಹಿಳೆ ಮೃತಪಟ್ಟ ಘಟನೆ ಬಂಟ್ವಾಳ ತಾಲೂಕಿನ ಸಜೀಪಮುನ್ನೂರು ಗ್ರಾಮದ ನಂದಾವರದಲ್ಲಿ ನಡೆದಿದೆ. ಮನೆಯೊಳಗೆ ಸಿಲುಕಿ ಹಾಕಿಕೊಂಡಿದ್ದ ಮತ್ತೊರ್ವ ಮಹಿಳೆಯನ್ನು ರಕ್ಷಣೆ ಮಾಡಲಾಗಿದೆ.

ನಂದಾವರ ನಿವಾಸಿ ಝರೀನಾ(47. ವ ) ಹಾಗೂ ಸಫಾ(20.ವ) ಮನೆಯಡಿಯಲ್ಲಿ ಸಿಲುಕಿ ಹಾಕಿಕೊಂಡವರು.
ಅವರಲ್ಲಿ ಸಫಾ ಅವರನ್ನು ರಕ್ಷಣೆ ಮಾಡಲಾಗಿದ್ದು
ಝರಿನಾ ಅವರು ಮೃತಪಟ್ಟಿದ್ದಾರೆ.
ಬಂಟ್ವಾಳ ಅಗ್ನಿಶಾಮಕ ಅಧಿಕಾರಿಗಳು, ಪೊಲೀಸರು, ತಾಲೂಕು ಆಡಳಿತದ ಸಿಬಂದಿ ಸ್ಥಳದಲ್ಲಿ ತಹಶೀಲ್ದಾರ್ ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಸ್ಥಳೀಯರು ರಕ್ಷಣಾ ಕಾರ್ಯಕ್ಕೆ ಸಹಕಾರ ನೀಡಿದ್ದಾರೆ.