ಸುಳ್ಯ: ಹೊಳೆಯಲ್ಲಿ ಕೊಚ್ಚಿ ಹೋದ ವ್ಯಕ್ತಿ: ಎಸ್.ಡಿ.ಆರ್.ಎಫ್, ಅಗ್ನಿಶಾಮಕ ದಳದಿಂದ ನಿರಂತರ ಕಾರ್ಯಾಚರಣೆ
ಸ್ಥಳಕ್ಕೆ ಸಹಾಯಕ ಕಮಿಷನರ್ ಭೇಟಿ
ಸುಳ್ಯದ ಆಲೆಟ್ಟಿ ಗ್ರಾಮದ ಕೂರ್ನಡ್ಕದಲ್ಲಿ ನಿನ್ನೆ ಸಂಜೆ 6 ಗಂಟೆ ವೇಳೆಗೆ ಪಾಲ ದಾಟುತ್ತಿದ್ದ ವ್ಯಕ್ತಿ ಹೊಳೆಗೆ ಬಿದ್ದು ಕೊಚ್ಚಿಕೊಂಡು ಹೋಗಿದ್ದು ನಿರಂತರ ಶೋಧ ಕಾರ್ಯಾಚರಣೆ ಬಳಿಕವು ವ್ಯಕ್ತಿಯ ಪತ್ತೆಯಾಗಿರುವುದಿಲ್ಲ ಎಂದು ತಿಳಿದು ಬಂದಿದೆ.

ಇಂದು(ಜು.7)ಬೆಳಗ್ಗಿನಿಂದ
ಎಸ್.ಡಿ.ಆರ್.ಎಫ್ ಹಾಗೂ ಅಗ್ನಿಶಾಮಕ ದಳ ತಂಡದ ಸುಮಾರು 15-20 ಮಂದಿ ಆಗಮಿಸಿ ಮೆಷಿನ್ ಬೋಟ್ ಬಳಸಿ ಹುಡುಕಾಟ ನಡೆಸುತ್ತಿದ್ದಾರೆ.
ಸ್ಥಳೀಯ ಮುಳುಗು ತಜ್ಞರು ಆಗಮಿಸಿ ನೀರಿನಲ್ಲಿ ಮುಳುಗಿ ಹುಡುಕಾಟ ನಡೆಸುತ್ತಿದ್ದು ಸ್ಥಳದಲ್ಲಿ ಅಧಿಕಾರಿಗಳು ಬೀಡು ಬಿಟ್ಟಿದ್ದು ಹುಡುಕಾಟಕ್ಕೆ ಮಾರ್ಗದರ್ಶನವನ್ನು ನೀಡುತ್ತಿದ್ದಾರೆ.

ಇಂದು ಸ್ಥಳಕ್ಕೆ ಸಹಾಯಕ ಕಮಿಷನರ್ ನಂದನ್ ಕುಮಾರ್ ಭೇಟಿ ನೀಡಿ ಘಟನೆಯ ಮಾಹಿತಿಯನ್ನು ಪಡೆದುಕೊಂಡಿದ್ದಾರೆ.
ಸುಳ್ಯತಹಶಿಲ್ದಾರ್ ಮಂಜುನಾಥ್,ಕಂದಾಯ ನಿರೀಕ್ಷಕ ಕೊರಗಪ್ಪ ಹೆಗ್ಡೆ, ಸುಳ್ಯ ಪೊಲೀಸ್ ಠಾಣಾ ಉಪನಿರೀಕ್ಷಕ ಈರಯ್ಯ ದೂಂತೂರು ರವರು ಘಟನಾ ಸ್ಥಳದಲ್ಲಿ ಉಪಸ್ಥಿತರಿದ್ದು ವ್ಯಕ್ತಿಯ ಪತ್ತೆಗಾಗಿ ಕಾರ್ಯ ಯೋಜನೆಯನ್ನು ರೂಪಿಸುತ್ತಿದ್ದಾರೆ.