ಪ್ರಧಾನಿ ಭೇಟಿ: ನಿವೃತ್ತಿ ಹಿಂಪಡೆದ ಬಾಂಗ್ಲಾ ನಾಯಕ ತಮೀಮ್ ಇಕ್ಬಾಲ್
ಢಾಕಾ: ಜು.6ರಂದು ಎಲ್ಲಾ ಮಾದರಿಯ ಕ್ರಿಕೆಟ್ ಗೆ ನಿವೃತ್ತಿ ಘೋಷಿಸಿದ್ದ ಬಾಂಗ್ಲಾದೇಶ ಕ್ರಿಕೆಟ್ ತಂಡದ ನಾಯಕ ತಮೀಮ್ ಇಕ್ಬಾಲ್ ಅವರು ರಾಜೀನಾಮೆ ಹಿಂಪಡೆದಿದ್ದಾರೆ. ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ ಅವರ ಮಧ್ಯಪ್ರವೇಶದ ನಂತರ ಬಾಂಗ್ಲಾದೇಶದ ತಮೀಮ್ ಇಕ್ಬಾಲ್ ನಿವೃತ್ತಿ ವಾಪಾಸ್ ಪಡೆದಿದ್ದಾರೆ.
ಏಕದಿನ ವಿಶ್ವಕಪ್ ಗೆ ಕೇವಲ ಮೂರು ತಿಂಗಳ ಇರುವಂತೆ ತಮೀಮ್ ದಿಢೀರ್ ನಿವೃತ್ತಿ ಘೋಷಿಸಿ ಅಚ್ಚರಿ ಮೂಡಿಸಿದ್ದರು. ಚಿತ್ತಗಾಂಗ್ ನಲ್ಲಿ ಪತ್ರಿಕಾಗೋಷ್ಠಿಯಲ್ಲಿ ನಿವೃತ್ತಿ ಘೋಷಣೆ ಮಾಡಿದ್ದ ಅವರು ಬೇಸರದಿಂದ ಕಣ್ಣೀರು ಹರಿಸಿದ್ದರು.