ಕ್ರೈಂರಾಜ್ಯ

400 ಅಡಿ ಆಳದ ಕೊಳವೆ ಬಾವಿಯಲ್ಲಿ ಜೈನಮುನಿ ಮೃತದೇಹ ಪತ್ತೆ..!

ಬೆಳಗಾವಿ: ಜೈನಮುನಿ ಕಾಮಕುಮಾರನಂದಿ ಮಹಾರಾಜ ಬರ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ರಾಯಬಾಗ ತಾಲೂಕಿನ ಖಟಕಬಾವಿ ಗ್ರಾಮದ ಗದ್ದೆಯ ಕೊಳವೆಬಾವಿಯಲ್ಲಿ ಜೈನಮುನಿ ಮೃತದೇಹ ಪತ್ತೆಯಾಗಿದೆ. ಸುಮಾರು 400 ಅಡಿ ಆಳದ ಕೊಳವೆ ಬಾವಿಗೆ ಮೃತದೇಹವನ್ನು ಪೀಸ್ ಪೀಸ್ ಮಾಡಿ ಎಸೆಯಲಾಗಿದೆ. ಕೊಳವೆಬಾವಿಯ 25 ಅಡಿ ಆಳದಲ್ಲಿ ರಕ್ತಸಿಕ್ತ ಸೀರೆ, ಟವೆಲ್ ಪತ್ತೆಯಾಗಿದ್ದು, 30 ಅಡಿ ಆಳದಲ್ಲಿ ತಲೆಯ 2 ಭಾಗ, ಕೈ, ಕಾಲು, ತೊಡೆ, ಹೊಟ್ಟೆ ಸೇರಿದಂತೆ 9 ಭಾಗಗಳು ಪತ್ತೆಯಾಗಿವೆ. ಮರಣೋತ್ತರ ಪರೀಕ್ಷೆಗೆ ಮೃತದೇಹವನ್ನು ಬೆಳಗಾವಿ ಜಿಲ್ಲಾಸ್ಪತ್ರೆಗೆ ರವಾನೆ ಮಾಡಲಾಗಿದೆ.

ಬೆಳಗ್ಗೆ 6 ಗಂಟೆಯಿಂದ ಮೃತದೇಹಕ್ಕಾಗಿ ಶೋಧಕಾರ್ಯ ನಡೆಸಿದ ಸಿಬ್ಬಂದಿಗಳು ಸತತ ಒಂಬತ್ತು ಗಂಟೆಗಳ ಕಾಲ ಕಾರ್ಯಾಚರಣೆ ಬಳಿಕ ಜೈನಮುನಿ ಮೃತದೇಹ ಪತ್ತೆ ಮಾಡಿದ್ದಾರೆ. ಮೃತದೇಹ ಸಿಕ್ಕ ಬೆನ್ನಲ್ಲೇ ಅಲರ್ಟ್ ಆದ ಪೊಲೀಸರು ಮಾರ್ಗದಲ್ಲಿ ಬ್ಯಾರಿಕೇಡ್ ಹಾಕಿ ಬಿಗಿ ಭದ್ರತೆ ನೀಡಿದ್ದಾರೆ.

ಜೈನ ಮುನಿ ಹತ್ಯೆ ಬಗ್ಗೆ ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರಿಗೆ ಶಿಕ್ಷೆ ಆಗುವಂತೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.

Leave a Reply

Your email address will not be published. Required fields are marked *

error: Content is protected !!