ಕರಾವಳಿಕ್ರೈಂ

ಪುಣಚ: ಕಾಲುಸಂಕ ದಾಟುತ್ತಿರುವಾಗ ಕೆಳಕ್ಕೆ ಬಿದ್ದು ವ್ಯಕ್ತಿ ಸಾವು



ವಿಟ್ಲ: ವ್ಯಕ್ತಿಯೊಬ್ಬರು ಕಾಲು ಸಂಕ ದಾಟುವಾಗ ಆಕಸ್ಮಿಕವಾಗಿ ಕಾಲು ಜಾರಿ ಚರಂಡಿಗೆ ಬಿದ್ದು ಮೃತಪಟ್ಟ ಘಟನೆ ಪುಣಚ ಗ್ರಾಮದ ಪರಿಯಾಲ್ತಡ್ಕ ಎಂಬಲ್ಲಿ ನಡೆದಿದೆ.‌ ಪುಣಚ ಗ್ರಾಮದ ಮಾಯಿಲ ಮೂಲೆ ನಿವಾಸಿ ಕೇಶವ ನಾಯ್ಕ ಎಂ (51. ವ) ಮೃತಪಟ್ಟವರು.‌

ಕೇಶವ ನಾಯ್ಕ ಅವರು ಪುಣಚ ಗ್ರಾಮದ ಪರಿಯಾಲ್ತಡ್ಕದಲ್ಲಿರುವ ತನ್ನ ಬಾಡಿಗೆ ಮನೆಯ ಕಡೆಗೆ ನಡೆದುಕೊಂಡು ಹೋಗುತ್ತಿದ್ದಾಗ ಮನೆಯ ಬಳಿಯಿರುವ ಚಿಕ್ಕ ಚರಂಡಿಗೆ ಕಾಲುಸಂಕ ದಾಟುತ್ತಿರುವಾಗ ಆಕಸ್ಮಿಕವಾಗಿ ಕಾಲುಜಾರಿ ಬಿದ್ದು ಮೃತಪಟ್ಟಿದ್ದಾರೆ.
ಈ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

Leave a Reply

Your email address will not be published. Required fields are marked *

error: Content is protected !!