ಗ್ರಾ.ಪಂ ಉಪ ಚುನಾವಣೆ: ನಿಡ್ಪಳ್ಳಿ ಗ್ರಾಮ ಪಂಚಾಯತ್ ಬಿಜೆಪಿ ಬೆಂಬಲಿತ ಅಭ್ಯರ್ಥಿಯಾಗಿ ಚಂದ್ರಶೇಖರ್ ಪ್ರಭು ನಾಮಪತ್ರ ಸಲ್ಲಿಕೆ
ಪುತ್ತೂರು: ನಿಡ್ಪಳ್ಳಿ ಗ್ರಾಮ ಪಂಚಾಯತ್‌ನ ಉಪಚುನಾವಣೆಗೆ ಬಿಜೆಪಿ ಬೆಂಬಲಿತ ಅಭ್ಯರ್ಥಿಯಾಗಿ ಚಂದ್ರಶೇಖರ್ ಪ್ರಭು ನಿಡ್ಪಳ್ಳಿ ಗ್ರಾಮ ಪಂಚಾಯತ್‌ನಲ್ಲಿ ನಾಮಪತ್ರ ಸಲ್ಲಿಸಿದರು. ಮಾಜಿ ಶಾಸಕ ಸಂಜೀವ ಮಟಂದೂರು, ಬಿಜೆಪಿ ಗ್ರಾಮಾಂತರ ಮಂಡಲ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವಾ ಸಹಿತ ಹಲವರು ಉಪಸ್ಥಿತರಿದ್ದರು.
ಪುತ್ತೂರು ತಾಲೂಕಿನ ಆರ್ಯಾಪು ಗ್ರಾಮ ಪಂಚಾಯತ್ ಮತ್ತು ನಿಡ್ಪಳ್ಳಿ ಗ್ರಾಮ ಪಂಚಾಯತಿಯಲ್ಲಿ ತೆರವಾಗಿದ್ದ ತಲಾ ಒಂದು ಸ್ಥಾನಗಳಿಗೆ ಜುಲೈ 23ರಂದು ಉಪಚುನಾವಣೆ ನಡೆಯಲಿದೆ.
ನಿಡ್ಪಳ್ಳಿ ಗ್ರಾಮ ಪಂಚಾಯತಿಯ ಒಂದನೇ ವಾರ್ಡ್ ಸದಸ್ಯ ಮುರಳೀಕೃಷ್ಣ ಭಟ್ ಕೆಲವು ತಿಂಗಳ ಹಿಂದೆ ಸಂಟ್ಯಾರು ಸಮೀಪ ನಡೆದ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದರು.