ಕರಾವಳಿರಾಜಕೀಯ

ರಾಹುಲ್ ಗಾಂಧಿ ವಿರುದ್ದ ಷಡ್ಯಂತ್ರ ಆರೋಪ- ಪುತ್ತೂರಿನಲ್ಲಿ ಬಿಜೆಪಿ ವಿರುದ್ದ ಕಾಂಗ್ರೆಸ್ ಪ್ರತಿಭಟನೆ



ಪುತ್ತೂರು: ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ನಾಯಕ ರಾಹುಲ್ ಗಾಂಧಿ ಅವರ ಸಂಸತ್ ಸದಸ್ಯತ್ವವನ್ನು ಅನೂರ್ಜಿತಗೊಳಿಸಲು ಹುನ್ನಾರ ನಡೆಯುತ್ತಿದೆ ಎಂದು ಕೇಂದ್ರ ಬಿಜೆಪಿ ಸರಕಾರದ ವಿರುದ್ಧ ಪುತ್ತೂರು, ವಿಟ್ಲ, ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ನೇತೃತ್ವದಲ್ಲಿ ಪುತ್ತೂರು ಗಾಂಧಿಕಟ್ಟೆ ಎದುರು ಒಂದು ದಿನ ಮೌನ ಪ್ರತಿಭಟನೆ ಜು.12ರಂದು ಬೆಳಗ್ಗಿನಿಂದ ಆರಂಭಗೊಂಡಿದೆ.

ಕಾಂಗ್ರೆಸ್ ನಾಯಕರು ಬಾಯಿಗೆ ಬಟ್ಟೆ ಸುತ್ತಿ ಪ್ರತಿಭಟನೆ ನಡೆಸಿದರು. ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ.ಬಿ.ವಿಶ್ವನಾಥ ರೈ ಮತ್ತು ವಿಟ್ಲ ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಡಾ.ರಾಜಾರಾಮ್ ಅವರು ಗಾಂಧಿ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಪ್ರತಿಭಟನೆಗೆ ಚಾಲನೆ ನೀಡಿದರು.


ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ.ಬಿ.ವಿಶ್ವನಾಥ ರೈ ಮಾತನಾಡಿ ಕೇಂದ್ರ ಬಿಜೆಪಿ ಸರ್ಕಾರ ಅಧಿಕಾರ ದುರುಪಯೋಗ ಪಡಿಸಿಕೊಂಡು ರಾಹುಲ್ ಗಾಂಧಿ ಅವರ ವಿರುದ್ಧ ಸುಳ್ಳು ಪ್ರಕರಣ ದಾಖಲಿಸಿ ಅವರ ಸದಸ್ಯತ್ವ ರದ್ದುಗೊಳಿಸಿ ದ್ವೇಷ ರಾಜಕಾರಣ ಮಾಡುತ್ತಿದ್ದು ಬಿಜೆಪಿಯ ಇಂತಹ ದುರಾಡಳಿತಕ್ಕೆ ಬೇಸತ್ತು ರಾಜ್ಯದ ಜನರು ತಕ್ಕ ಪಾಠ ಕಲಿಸಿದ್ದಾರೆ. ಮುಂಬರುವ ಲೋಕಸಭಾ ಚುನಾವಣೆಯಲ್ಲಿಯೂ ಜನರು ಒಗ್ಗಟ್ಟಾಗಿ ಮೋದಿ ನೇತೃತ್ವದ ಕೇಂದ್ರ ಸರಕಾರವನ್ನು ಸೋಲಿಸಲಿದ್ದಾರೆ ಎಂದರು.

ವಿಟ್ಲ-ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಡಾ. ರಾಜಾರಾಮ ಮಾತನಾಡಿದರು. ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಅಮಳ ರಾಮಚಂದ್ರ, ಕೃಷ್ಣಪ್ರಸಾದ್ ಅಳ್ವ, ಕಾಂಗ್ರೆಸ್ ಮುಖಂಡರಾದ ಶ್ರೀಪ್ರಸಾದ್, ಮುರಳೀದರ ಮಠಂತಬೆಟ್ಟು, ಕಾವು ಹೇಮನಾಥ ಶೆಟ್ಟಿ, ಪ್ರಸಾದ್ ಕೌಶಲ್ ಶೆಟ್ಟಿ, ಮೌರೀಸ್ ಮಸ್ಕರೇನಸ್, ವೇದನಾಥ ಸುವರ್ಣ, ಅನ್ವರ್ ಖಾಸಿಂ, ಸಂತೋಷ್ ಭಂಡಾರಿ ಚಿಲ್ಮೆತ್ತಾರು, ಪ್ರಶಾಂತ್ ಮುರ, ಕಲೀಲ್, ಜಗನ್ನಾಥ, ಬೊಲೋಡಿ ಚಂದ್ರಹಾಸ ರೈ, ಲ್ಯಾನ್ಸಿ ಮಸ್ಕರೇನಸ್, ರಮೇಶ್ ರೈ ಡಿಂಬ್ರಿ, ಮಹಾಲಿಂಗ ನಾಯ್ಕ್ , ಹಾರಿಸ್ ಸಂಟ್ಯಾರ್, ಗಿರೀಶ್ ಗೋಶ್ವಾಲ್ಕರ್, ಜಯಪ್ರಕಾಶ್ ಬದಿನಾರು, ಶರೀಫ್ ಬಲ್ನಾಡ್, ವಲೇರಿಯನ್ ಡಯಾಸ್ ಸಹಿತ ಹಲವಾರು ಮಂದಿ ಭಾಗವಹಿಸಿದ್ದರು.

Leave a Reply

Your email address will not be published. Required fields are marked *

error: Content is protected !!