ರಾಹುಲ್ ಗಾಂಧಿ ಪರ ಕಾಂಗ್ರೆಸ್ ಮೌನ ಪ್ರತಿಭಟನೆ
ಕಾಂಗ್ರೆಸ್ ರಾಷ್ಟ್ರೀಯ ನಾಯಕ ರಾಹುಲ್ ಗಾಂಧಿ ಅವರ ರಾಜಕೀಯ ಜೀವನ ಮುಗಿಸಲು ಕೇಂದ್ರ ಸರ್ಕಾರ ಪಿತೂರಿ ರೂಪಿಸಿದೆ ಎಂದು ಆರೋಪಿಸಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಇಂದು ಮೌನ ಪ್ರತಿಭಟನೆ ನಡೆಸಿತು.
ಸ್ವಾತಂತ್ರ್ಯ ಉದ್ಯಾನವನದಲ್ಲಿ ಬೆಳಗ್ಗೆ 10 ಗಂಟೆಗೆ ಆರಂಭವಾದ ಪ್ರತಿಭಟನೆಯಲ್ಲಿ ಕಾಂಗ್ರೆಸ್ ನಾಯಕರು ಬಾಯಿಗೆ ಕಪ್ಪುಬಟ್ಟೆ ಕಟ್ಟಿಕೊಂಡು ಪ್ರತಿಭಟನೆಯಲ್ಲಿ ಪಾಲ್ಗೊಂಡರು. ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ, ಡಿಸಿಎಂ ಡಿ.ಕೆ. ಶಿವಕುಮಾರ್, ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ, ಮಂತ್ರಿಗಳಾದ ಕೆ ಎಚ್ ಮುನಿಯಪ್ಪ, ರಾಮಲಿಂಗಾರೆಡ್ಡಿ, ಬೋಸರಾಜ್, ಸಂಸದರು, ಶಾಸಕರು, ವಿಧಾನ ಪರಿಷತ್ ಸದಸ್ಯರು, ಕೆಪಿಸಿಸಿ ಪದಾಧಿಕಾರಿಗಳು, ಪಕ್ಷದ ಮುಂಚೂಣಿ ಘಟಕಗಳ ಪದಾಧಿಕಾರಿಗಳು ಮತ್ತಿತರರು ಭಾಗವಹಿಸಿ ರಾಹುಲ್ ಗಾಂಧಿಯವರಿಗೆ ಬೆಂಬಲ ವ್ಯಕ್ತಪಡಿಸಿದರು