ಕರಾವಳಿಕ್ರೈಂ

ಉಪ್ಪಿನಂಗಡಿ ಪೊಲೀಸ್ ಠಾಣಾ ಹೆಡ್ ಕಾನ್ಸ್‌ಟೇಬಲ್‌ ಕೃಷ್ಣಪ್ಪ ನಾಯ್ಕ್ ನಿಧನ



ಪುತ್ತೂರು: ಉಪ್ಪಿನಂಗಡಿ ಠಾಣಾ ಹೆಡ್ ಕಾನ್ಸ್‌ಟೇಬಲ್‌ ಮಾಣಿ ಸಮೀಪದ ನೇರಳಕಟ್ಟೆ ನಿವಾಸಿ ಕೃಷ್ಣಪ್ಪ ನಾಯ್ಕ್ ಜೆ ಜುಲೈ 12ರಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.

ಕೃಷ್ಣಪ್ಪನವರು ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಹೆಡ್ ಕಾನ್ಸ್‌ಟೇಬಲ್‌ ಆಗಿ ಕಳೆದ ಆರು ವರ್ಷಗಳಿಂದ ಕರ್ತವ್ಯ ನಿರ್ವಹಿಸುತ್ತಿದ್ದರು. ಅನಾರೋಗ್ಯದ ಹಿನ್ನೆಲೆಯಲ್ಲಿ 2022 ರಿಂದ ರಜೆಯಲ್ಲಿದ್ದ ಅವರು ಇಂದು ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಪೊಲೀಸ್ ಇಲಾಖೆಯಲ್ಲಿ 26 ವರ್ಷಗಳ ಕಾಲ ಕರ್ತವ್ಯ ನಿರ್ವಹಿಸಿದ್ದ ಕೃಷ್ಣಪ್ಪ ಅವರು ಪತ್ನಿ, ಓರ್ವ ಪುತ್ರ, ಓರ್ವ ಪುತ್ರಿ ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.

Leave a Reply

Your email address will not be published. Required fields are marked *

error: Content is protected !!