ಬಿಹಾರ: ಪ್ರತಿಭಟನೆ ವೇಳೆ ಪೊಲೀಸ್ ಲಾಠಿ ಚಾರ್ಜ್: ಬಿಜೆಪಿ ಮುಖಂಡ ಬಲಿ
ಶಿಕ್ಷಕರ ನೇಮಕಾತಿ ನಿಯಮಾವಳಿ ವಿರೋಧಿಸಿ ಬಿಹಾರದ ಪಾಟ್ನಾದಲ್ಲಿ ನಡೆದ ಪ್ರತಿಭಟನೆ ವೇಳೆ ಪೊಲೀಸರ ಲಾಠಿಚಾರ್ಜ್‌ಗೆ ಬಿಜೆಪಿ ನಾಯಕರೊಬ್ಬರು ಮೃತಪಟ್ಟಿದ್ದಾರೆ.

ಬಿಹಾರ ಸರ್ಕಾರದ ವಿರುದ್ಧ ಇಂದು ಬಿಜೆಪಿ ಪ್ರತಿಭಟನೆ ಆಯೋಜಿಸಿತ್ತು. ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ಹೋಗುತ್ತಿದ್ದಾಗ ಪೊಲೀಸರು ಲಾಠಿ ಚಾರ್ಜ್ ಮಾಡಿದ್ದಾರೆ.
ಪೊಲೀಸರ ಲಾಠಿಯಿಂದ ಬಲವಾಗಿ ಏಟು ತಿಂದಿದ್ದ ಜೆಹಾನಾಬಾದ್ ಜಿಲ್ಲೆಯ ಅಧ್ಯಕ್ಷ ವಿಜಯ್ ಕುಮಾರ್ ಸಿಂಗ್ ಮೃತಪಟ್ಟಿದ್ದಾರೆ.
ಪ್ರತಿಭಟನೆಯನ್ನು ಚದುರಿಸಲ ಪೊಲೀಸರು ಟಿಯರ್ ಗ್ಯಾಸ್ ಪ್ರಯೋಗಿಸಿದ್ದರು.