ಕರಾವಳಿ

ಕೆಸರುಮಯವಾದ ಪಾಟ್ರಕೋಡಿ ರಸ್ತೆಯ ದುರಸ್ತಿಗೆ ಸಾಮಾಜಿಕ ಕಾರ್ಯಕರ್ತ ಅಬ್ದುಲ್ ಖಾದರ್ ಪಾಟ್ರಕೋಡಿ ಆಗ್ರಹ

ಬಂಟ್ವಾಳ ತಾಲೂಕಿನ ಕೆದಿಲ ಗ್ರಾಮ ಪಂಚಾಯತಿಗೆ ಒಳಪಟ್ಟ ಪಾಟ್ರಕೋಡಿಯ ಕೋಡಿ ಸಂಪರ್ಕ ರಸ್ತೆ ಹಲವಾರು ವರ್ಷಗಳಿಂದ ಹದಗೆಟ್ಟು ನಡೆಯಲಾಗದ ಈ ಸ್ಥಿತಿಯಲ್ಲಿದ್ದು ಇನ್ನಾದರೂ ಸಂಬಂಧಪಟ್ಟವರು ಗಮನಹರಿಸಿ ಈ ಭಾಗದ ಜನರ ಬಹುಕಾಲದ ಬೇಡಿಕೆ ಈಡೇರಿಸುವಂತೆ ಸಾಮಾಜಿಕ ಕಾರ್ಯಕರ್ತ ಅಬ್ದುಲ್ ಖಾದರ್ ಪಾಟ್ರಕೋಡಿ ಆಗ್ರಹಿಸಿದ್ದಾರೆ.

ಈ ರಸ್ತೆ ಹಲವು ವರ್ಷಗಳಿಂದ ಮಳೆಗಾಲದಲ್ಲಿ ಈ ರೀತಿ ಕೆಸರುಮಯವಾಗಿ ವಾಹನಗಳಿಗೆ ಸ್ಥಳೀಯರಿಗೆ ಸಂಚರಿಸಲು ಆಗದ ಪರಿಸ್ಥಿತಿ ನಿರ್ಮಾಣ ಆಗಿದೆ. ಈ ಸಮಸ್ಯೆಯನ್ನು ಸ್ಥಳೀಯ ಗ್ರಾಮ ಪಂಚಾಯತ್ ಸದಸ್ಯರುಗಳಿಗೆ ಮನವಿ ಸಲ್ಲಿಸಿ ವರ್ಷಗಳಾಗಿವೆ, ಅವರು ಈ ರಸ್ತೆಯನ್ನು ಅಭಿವೃದ್ಧಿಪಡಿಸುದಾಗಿ ಭರವಸೆಯನ್ನು ನೀಡಿದ್ದರೂ ಈ ರಸ್ತೆಯ ಅಭಿವೃದ್ಧಿ ಕನಸಾಗಿಯೇ ಉಳಿದಿದೆ ಎಂದು ಅವರು ತಿಳಿಸಿದ್ದಾರೆ .

Leave a Reply

Your email address will not be published. Required fields are marked *

error: Content is protected !!