ಸಿಎಂ ಸಿದ್ದರಾಮಯ್ಯರಿಗೆ ಅಭಿನಂದನೆ ಸಲ್ಲಿಸಿದ ವೀರೇಂದ್ರ ಹೆಗ್ಗಡೆ
ಸಿಎಂ ಸಿದ್ಧರಾಮಯ್ಯ ಅವರು 14ನೇ ಬಾರಿಗೆ ರಾಜ್ಯ ಬಜೆಟ್ ಮಂಡಿಸಿದ್ದು ಸಿದ್ಧರಾಮಯ್ಯ ಅವರಿಗೆ ಧರ್ಮಸ್ಥಳದ ಧರ್ಮದರ್ಶಿ ವೀರೇಂದ್ರ ಹೆಗ್ಗಡೆ ಅವರು ಪತ್ರ ಬರೆದು ಅಭಿನಂದನೆ ಸಲ್ಲಿಸಿದ್ದಾರೆ. ಜತೆಗೆ ಶಕ್ತಿ ಯೋಜನೆಗೆ ಸಿಕ್ಕಿರುವ ಜನ ಮನ್ನಣೆಗೆ ಮೆಚ್ಚುಗೆ ಸೂಚಿಸಿದ್ದಾರೆ. ತಮ್ಮ ಹೆಸರಿನಲ್ಲಿ ಮಂಜುನಾಥೇಶ್ವರನಿಗೆ ಮಹಿಳೆಯರು ಸೇವೆ ಮತ್ತು ಕಾಣಿಕೆಗಳನ್ನ ಸಲ್ಲಿಸುತ್ತಿದ್ದಾರೆ ಎಂದು ಅವರು ಉಲ್ಲೇಖಿಸಿದ್ದಾರೆ.
ಜೈನ ಸಮುದಾಯಕ್ಕೆ ವಿಶೇಷ ಅನುದಾನ ನೀಡಿ, ಪ್ರೋತ್ಸಾಹ ನೀಡಿರುವುದು ಸಮುದಾಯಕ್ಕೆ ಸಂತೋಷ ತಂದಿದೆ. ಅವಕಾಶ ಸಿಕ್ಕಾಗ ಮಂಜುನಾಥ ಸ್ವಾಮಿಯ ದರ್ಶನ ಪಡೆಯುವಂತೆ ಅವರು ಸಿದ್ದರಾಮಯ್ಯ ಅವರನ್ನು ಅಪೇಕ್ಷಿಸಿದ್ದಾರೆ.ಶ್ರೀ ಮಂಜುನಾಥ ಸ್ವಾಮಿಯ ಅನುಗ್ರಹವಿರಲಿ ಎಂದು ಪತ್ರದಲ್ಲಿ ಬರೆದಿದ್ದಾರೆ.