ಆರೋಗ್ಯರಾಜ್ಯ

ಬೆಂಗಳೂರಿನಲ್ಲಿ ಡೆಂಗ್ಯೂ ಪ್ರಕರಣಗಳ ಸಂಖ್ಯೆ ಏರಿಕೆ

ಬೆಂಗಳೂರಿನಲ್ಲಿ ಡೆಂಗ್ಯೂ ಪ್ರಕರಣಗಳ ಸಂಖ್ಯೆ ಏರಿಕೆಯಾಗುತ್ತಿದೆ. ನಗರದಲ್ಲಿ ಡೆಂಗ್ಯೂ ಜ್ವರ ಹೆಚ್ಚಳವಾಗುತ್ತಿದ್ದು, ಕಳೆದ 11 ದಿನಗಳಲ್ಲಿ 178 ಡೆಂಗ್ಯೂ ಪ್ರಕರಣಗಳು ಪತ್ತೆಯಾಗಿವೆ ಎಂದು ವರದಿಯಾಗಿದೆ.

ಈ ವರ್ಷ ಬಿಬಿಎಂಪಿ ವ್ಯಾಪ್ತಿಯಲ್ಲಿ 3565 ಡೆಂಗ್ಯೂ ಶಂಕಿತರ ಗುರುತು ಪತ್ತೆಯಾಗಿದೆ. ಈ ಪೈಕಿ 1009 ಜನರ ರಕ್ತದ ಮಾದರಿ ಪರೀಕ್ಷೆಗೆ ರವಾನೆ ಮಾಡಲಾಗಿದ್ದು 1009 ಜನರ ಪೈಕಿ 905 ಜನರಿರಲ್ಲಿ ಡೆಂಗ್ಯೂ ಸೋಂಕು ದೃಢವಾಗಿದೆ. ಬೆಂಗಳೂರಿನಲ್ಲಿ ಈವರೆಗೆ 919 ಡೆಂಗ್ಯು ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, ಡೆಂಗ್ಯೂ ಜ್ವರದಿಂದ ಯಾವುದೇ ಸಾವು ಸಂಭವಿಸಿಲ್ಲ.

Leave a Reply

Your email address will not be published. Required fields are marked *

error: Content is protected !!