ಕರಾವಳಿರಾಜಕೀಯ

ಬೆಳ್ತಂಗಡಿ ಕಾಂಗ್ರೆಸ್ ಸಭೆಯಲ್ಲಿ ಬಣಗಳ ಮಧ್ಯೆ ಮಾತಿನ ಚಕಮಕಿ: ಜಿಲ್ಲಾಧ್ಯಕ್ಷರ ಬದಲಾವಣೆಗೆ ಸಾಮಾಜಿಕ ಜಾಲ ತಾಣದಲ್ಲಿ ಆಗ್ರಹ

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಸೋಲಿಗೆ ಕಾರಣಗಳ ಕುರಿತು ಪರಾಮರ್ಶೆ ಸಭೆ ಜು.14ರಂದು ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ನಡೆದಿದ್ದು ಸಭೆಯಲ್ಲಿ ಎರಡು ಬಣಗಳ ಮಧ್ಯೆ ಮಾತಿನ ಚಕಮಕಿ ನಡೆದಿದೆ.

ರಕ್ಷಿತ್ ಶಿವರಾಮ್ ಬಣ ಮತ್ತು ಕಾಂಗ್ರೆಸ್ ಮುಖಂಡರ ನಡುವೆ ವಾಗ್ವಾದ ನಡೆದಿದೆ ಎಂದು ವರದಿಯಾಗಿದೆ. ಸತ್ಯ ಶೋಧನಾ ಸಮಿತಿ ಅಧ್ಯಕ್ಷ ಇಬ್ರಾಹಿಂ ಸಭೆ ನಡೆಸುತ್ತಿದ್ದ ವೇಳೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಂಜನ್ ಗೌಡ, ಶೈಲೇಶ್ ಕುಮಾರ್, ಕೇಶವ್ ಪಿ, ಹರೀಶ್ ಕುಮಾರ್, ಮ್ಯಾಥ್ಯೂ, ರಾಜಶೇಖರ್ ಮತ್ತಿತರರು ಸಭೆಯಲ್ಲಿದ್ದರು.

ಈ ವೇಳೆ ಎರಡು ಬಣಗಳ ಮಧ್ಯೆ ಮಾತಿನ ಚಕಮಕಿ ನಡೆದು ಪರಸ್ಪರ ವಾಗ್ವಾದ ನಡೆದಿದೆ. ಸ್ಥಳಕ್ಕೆ ಪೊಲೀಸರು ಆಗಮಿಸಿದ್ದರು.

 ಸುಳ್ಯ ಹಾಗೂ ಬೆಳ್ತಂಗಡಿಯಲ್ಲಿ ಕಾಂಗ್ರೆಸ್ ಗುಂಪುಗಾರಿಕೆ ಜೋರಾಗಿ ನಡೆಯುತ್ತಿದ್ದು ಸದ್ಯಕ್ಕೆ ನಿಲ್ಲುವ ಲಕ್ಷಣ ಗೋಚರಿಸುತ್ತಿಲ್ಲ. ಈತನ್ಮಧ್ಯೆ ಕಾಂಗ್ರೆಸ್ ದ.ಕ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್ ಅವರನ್ನು ಬದಲಾಯಿಸಬೇಕೆಂದು ಸಾಮಾಜಿಕ ಜಾಲ ತಾಣದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಆಗ್ರಹಿಸಿದ್ದಾರೆ. ಭಿನ್ನಮತ ಶಮನಗೊಳಿಸುವಲ್ಲಿ ವಿಫಲವಾಗಿರುವ ಜಿಲ್ಲಾಧ್ಯಕ್ಷರು ಪಕ್ಷ ಸಂಘಟಿಸುವಲ್ಲಿ ವಿಫಲರಾಗಿದ್ದಾರೆ, ಅಲ್ಲದೇ ಜಿಲ್ಲೆಯಲ್ಲಿ ಕಾಂಗ್ರೆಸ್ ಹೀನಾಯವಾಗಿ ಸೋತಿದೆ, ಹಾಗಿರುವಾಗ ಜಿಲ್ಲಾಧ್ಯಕ್ಷರನ್ನು ಬದಲಾಯಿಸುವುದೇ ಸೂಕ್ತ ಎಂದು ಹಲವರು ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ.

Leave a Reply

Your email address will not be published. Required fields are marked *

error: Content is protected !!