ಸಿಎಂ ಸಿದ್ದರಾಮಯ್ಯ ವಿರುದ್ದ ಅವಹೇಳನಕಾರಿ ಪೋಸ್ಟ್: ಆರೋಪಿಯ ಬಂಧನ
ಟಿ ನರಸೀಪುರದಲ್ಲಿ ಹಿಂದೂ ಕಾರ್ಯಕರ್ತ ವೇಣುಗೋಪಾಲ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ದ ಇನ್‌ಸ್ಟಾಗ್ರಾಮ್ನಲ್ಲಿ ಅವಹೇಳನಕಾರಿ ಪೋಸ್ಟ್ ಮಾಡಿದ್ದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ.

ರಂಜನೀಸ್ (28.ವ) ಬಂಧಿತ ಆರೋಪಿ. ಈತ ಸಿದ್ದರಾಮಯ್ಯ ವಿರುದ್ದ ಅವಹೇಳನಕಾರಿ ಪೋಸ್ಟ್ ಮಾಡಿದ್ದ ಹಿನ್ನಲೆಯಲ್ಲಿ ಆತನ ವಿರುದ್ದ ಎಫ್ ಐ ಆರ್ ದಾಖಲಾಗಿತ್ತು. ಇದೀಗ ಆರೋಪಿಯನ್ನ ಬಂಧಿಸಲಾಗಿದೆ.