ಕರಾವಳಿ

ಕುಂಬ್ರ ಮರ್ಕಝುಲ್ ಹುದಾ ಮಹಿಳಾ ಪ್ರಥಮ ದರ್ಜೆ ಕಾಲೇಜು ವಾರ್ಷಿಕೋತ್ಸವ



ನಾಯಕತ್ವ ಗುಣ, ದೃಢ ಸಂಕಲ್ಪವಿದ್ದರೆ ಉನ್ನತ ಸ್ಥಾನಕ್ಕೆ ಏರಬಹುದು-ಡಾ.ಝಕಿಯಾ

ಪುತ್ತೂರು: ಕುಂಬ್ರ ಮರ್ಕಝುಲ್ ಹುದಾ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ವಾರ್ಷಿಕೋತ್ಸವ ಕಾರ್ಯಕ್ರಮ ಸಂಸ್ಥೆಯ ಕ್ಯಾಂಪಸ್‌ನಲ್ಲಿ ನಡೆಯಿತು.

ಮುಖ್ಯ ಅತಿಥಿಯಾಗಿ ಭಾಗವಹಿಸಿದ ದುಬೈ ಹೇರಿಟ್ ವಾಟ್ ಯೂನಿವರ್ಸಿಟಿ ಕ್ಯಾಂಪಸ್‌ನ ಅಸಿಸ್ಟೆಂಟ್ ಪ್ರೊಫೆಸರ್ ಡಾ.ಝಕಿಯಾ ಅಬ್ದುಲ್ ಸಮದ್ ಮಾತನಾಡಿ ವಿದ್ಯಾರ್ಥಿಗಳು ನಾಯಕತ್ವ ಗುಣ, ದೃಢ ಸಂಕಲ್ಪ, ಉದಾರತೆ ಹಾಗೂ ಪ್ರತಿಯೊಬ್ಬರನ್ನು ಗೌರವಿಸುವ ಕಲೆ ಕರಗತ ಮಾಡಿಕೊಂಡರೆ ಭವಿಷ್ಯದಲ್ಲಿ ಉನ್ನತ ಸ್ಥಾನಕ್ಕೆ ಏರಬಹುದು ಎಂದು ಹೇಳಿದರು.

ಅಧ್ಯಕ್ಷತೆ ವಹಿಸಿದ್ದ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಅರಿಯಡ್ಕ ಅಬ್ದುರ್ರಹ್ಮಾನ್ ಹಾಜಿ ಮಾತನಾಡಿ ಶಿಕ್ಷಣ ಕ್ಷೇತ್ರದಲ್ಲಿ ಮಕ್ಕಳು ಯಶಸ್ಸಿನ ಗುರಿ ತಲುಪಲು ಕಠಿಣ ಪರಿಶ್ರಮ ಪಡಬೇಕು ಎಂದು ಹೇಳಿದರು. ಪ್ರಸ್ತಾವನೆಗೈದ ಸಂಸ್ಥೆಯ ಕಾರ್ಯದರ್ಶಿ ಅಡ್ವೊಕೇಟ್ ಶಾಕಿರ್ ಹಾಜಿ ಮಿತ್ತೂgಟ್ರವರು ಸಂಸ್ಥೆಯ ಪ್ರಾಂಶುಪಾಲರ ಕಾರ್ಯಚಟುವಟಿಕೆಗಳು ಮಕ್ಕಳಿಗೆ ಪ್ರೇರಣೆ ನೀಡುತ್ತಿದೆ ಎಂದು ಪ್ರಶಂಸಿಸಿದರು. ವಾರ್ಷಿಕೋತ್ಸವದ ಅಂಗವಾಗಿ ಹಮ್ಮಿಕೊಂಡಿದ್ದ ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿ ವಿಜಯಿಗಳಾದ ವಿದ್ಯಾರ್ಥಿನಿಯರು ಹಾಗೂ ಕಲಿಕೆಯಲ್ಲಿ ಸಾಧನೆಗೈದ ವಿದ್ಯಾರ್ಥಿನಿಯರಿಗೆ ಪ್ರಶಸ್ತಿ ಮತ್ತು ಫಲಕ ವಿತರಿಸಲಾಯಿತು.

ಕಾರ್ಯಕ್ರಮದಲ್ಲಿ ಸಂಸ್ಥೆಯ ಮ್ಯಾನೇಜರ್ ಉಮರ್ ಅಮ್ಜದಿ ಕುಕ್ಕಿಲ ಹಾಗೂ ಪದವಿ ಪೂರ್ವ ವಿಭಾಗದ ಪ್ರಿನ್ಸಿಪಾಲ್ ಸಂಧ್ಯಾ ಪಿ ಶೆಟ್ಟಿ ಉಪಸ್ಥಿತರಿದ್ದರು. ಪದವಿ ಪ್ರಾಂಶುಪಾಲರಾದ ಮುಹಮ್ಮದ್ ಮನ್ಸೂರ್ ವಾರ್ಷಿಕ ವರದಿ ವಾಚಿಸಿದರು.

Leave a Reply

Your email address will not be published. Required fields are marked *

error: Content is protected !!