ಗೃಹಲಕ್ಷ್ಮಿ ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ
ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಜು.19ರಂದು ಸಂಜೆ ಚಾಲನೆ ನೀಡಿದರು.

ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ನಡೆದ ಸಮಾರಂಭದಲ್ಲಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಉಪಸ್ಥಿತರಿದ್ದರು. ಯೋಜನೆಗೆ ಅರ್ಹರಾಗಿರುವ ಮಹಿಳೆಯರು ಇಂದಿನಿಂದ ಅರ್ಜಿಗಳನ್ನು ಸಲ್ಲಿಸಲು ಪ್ರಾರಂಭಿಸಬಹುದಾಗಿದೆ.