ರಾಜ್ಯ

ಗೃಹ ಲಕ್ಷ್ಮೀ ಯೋಜನೆ ನೋಂದಣಿ ಪ್ರಕ್ರಿಯೆಗೆ ಚಾಲನೆ: ಯಾವೆಲ್ಲಾ ದಾಖಲೆಗಳು ಬೇಕು? ನೋಂದಣಿ ಹೇಗೆ..? ಎಲ್ಲಿ..?

ಕಾಂಗ್ರೆಸ್ ಗ್ಯಾರಂಟಿ ಯೋಜನೆಯಾದ ಮನೆ ಯಜಮಾನಿಗೆ ತಿಂಗಳಿಗೆ 2 ಸಾವಿರ ರೂ. ನೀಡುವ ‘ಗೃಹಲಕ್ಷ್ಮೀ ಯೋಜನೆ’ ನೋಂದಣಿ ಪ್ರಕ್ರಿಯೆಗೆ ಜು.19ರಂದು ಚಾಲನೆ ನೀಡಲಾಯಿತು.

ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ನಡೆದ ನೋಂದಣಿ ಪ್ರಕ್ರಿಯೆ ಚಾಲನೆ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಖಾತೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹಾಗೂ ಹಿರಿಯ ಸಚಿವರು, ಶಾಸಕರು ಉಪಸ್ಥಿತರಿದ್ದರು.

ಮಾರ್ಗಸೂಚಿ: ರಾಜ್ಯದ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯಿಂದ ವಿತರಿಸಿರುವ ಅಂತ್ಯೋದಯ, ಬಿಪಿಎಲ್‌ ಮತ್ತು ಎಪಿಎಲ್‌ ಪಡಿತರ ಚೀಟಿಯಲ್ಲಿ ಕುಟುಂಬದ ಯಜಮಾನಿ ಎಂದು ನಮೂದಿಸಿರುವ ಮಹಿಳೆ ಮಾತ್ರ ಅರ್ಜಿ ಸಲ್ಲಿಸಬಹುದಾಗಿದೆ. ಯಜಮಾನಿ ಅಥವಾ ಅವಳ ಪತಿ ಆದಾಯ ತೆರಿಗೆ ಪಾವತಿದಾರರಾಗಿದ್ದಲ್ಲಿ ಅಥವಾ ಜಿಎಸ್‌ಟಿ ರಿಟರ್ನ್ಸ್ ಸಲ್ಲಿಸುವವರು ಈ ಯೋಜನೆಗೆ ಅನರ್ಹರಾಗಿರುತ್ತಾರೆ.

ಯಾವೆಲ್ಲ ದಾಖಲೆಗಳು ಬೇಕು:
ಪಡಿತರ ಚೀಟಿಯ ಸಂಖ್ಯೆ, ಯಜಮಾನಿ ಮತ್ತು ಯಜಮಾನಿ ಪತಿಯ ಆಧಾರ್‌ ಕಾರ್ಡ್‌ ಸಂಖ್ಯೆ. ಯಜಮಾನಿಯ ಆಧಾರ್‌ಗೆ ಜೋಡಣೆಯಾಗಿರುವ ಬ್ಯಾಂಕ್‌ ಖಾತೆಯ ಪಾಸ್‌ಬುಕ್‌/ಫ‌ಲಾನುಭವಿಯು ಇಚ್ಛಿಸುವ ಪರ್ಯಾಯ ಬ್ಯಾಂಕ್‌ ಖಾತೆಯ ವಿವರ ಇರಬೇಕು.

ನೋಂದಣಿ ಹೇಗೆ..? ಎಲ್ಲಿ..?
ಫ‌ಲಾನುಭವಿಗಳು ಗ್ರಾಮ ಒನ್‌, ಬೆಂಗಳೂರು ಒನ್‌, ಕರ್ನಾಟಕ ಒನ್‌ ಹಾಗೂ ಬಾಪೂಜಿ ಸೇವಾ ಕೇಂದ್ರಗಳಲ್ಲಿ ಅಥವಾ ಪ್ರಜಾ ಪ್ರತಿನಿಧಿ ಮೂಲಕ ಸೇವಾಸಿಂಧು ಪೋರ್ಟಲ್‌ನಲ್ಲಿ ಉಚಿತವಾಗಿ ನೋಂದಾಯಿಸಿಕೊಳ್ಳಬಹುದು. ಪ್ರತೀ ಫ‌ಲಾನುಭವಿಯ ನೋಂದಣಿಗೆ ನಿಗದಿ ಮಾಡಿರುವ ದಿನಾಂಕ, ಸಮಯ ಮತ್ತು ಸ್ಥಳವನ್ನು 1902ಕ್ಕೆ ಕರೆ ಮಾಡಿ ಅಥವಾ 8147500500 ಸಂಖ್ಯೆಗೆ ಎಸ್‌ಎಂಎಸ್‌ ಮಾಡುವ ಮೂಲಕ ಮಾಹಿತಿ ಪಡೆಯಬಹುದಾಗಿದೆ. ಅನುಮೋದಿಸಲ್ಪಟ್ಟ ಅರ್ಹ ಫ‌ಲಾನುಭವಿಗಳಿಗೆ ಮಂಜೂರಾತಿ ಪತ್ರ ನೀಡಲಾಗುವುದು.

Leave a Reply

Your email address will not be published. Required fields are marked *

error: Content is protected !!