ರಾಜಕೀಯರಾಜ್ಯ

ಹಾಲಿನ ದರ ಏರಿಕೆಗೆ ಮಾಜಿ‌ ಸಿಎಂ ಹೆಚ್.ಡಿ ಕುಮಾರಸ್ವಾಮಿ ಕಿಡಿ



ಬೆಂಗಳೂರು: ಹಾಲಿನ ದರ 3 ರೂಪಾಯಿ ಏರಿಕೆ ಮಾಡಿದ ರಾಜ್ಯ ಸರ್ಕಾರದ ವಿರುದ್ದ ಮಾಜಿ‌ ಸಿಎಂ ಹೆಚ್ ಡಿ ಕುಮಾರಸ್ವಾಮಿ ಕಿಡಿಕಾರಿದ್ದಾರೆ.

ಸರಣಿ ಟ್ವೀಟ್ ಮಾಡಿರುವ ಅವರು ‘ಆಲ್ಕೋಹಾಲಿನ ಬೆಲೆ ಏರಿಸಿದ ನಂತರ ಸರಕಾರ ಹಾಲಿನ ಬೆಲೆಯನ್ನೂ ಲೀಟರಿಗೆ 3ರೂ.ಹೆಚ್ಚಿಸಿದೆ. ಶ್ರಮಜೀವಿಗಳ ಕಿಸೆಗೆ ಕನ್ನ ಕೊರೆದಿದೆ. ಒಂದು ಕೈಯ್ಯಲ್ಲಿ ಕೊಟ್ಟು, ಇನ್ನೊಂದು ಕೈಯ್ಯಲ್ಲಿ ಕಸಿದುಕೊಳ್ಳುತ್ತಿದೆ! ಸ್ವತಃ ತಾವೇ ಕಿವಿಯಲ್ಲಿ ಹೂವಿಟ್ಟುಕೊಂಡಿದ್ದ ಕಾಂಗ್ರೆಸ್ಸಿಗರು, ಈಗ ಜನರ ತಲೆಯ ಮೇಲೆ ಫ್ಲವರ್ ಪಾಟ್ ಇಡುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಚುನಾವಣೆಗೆ ಮುನ್ನ ಬೆಲೆ ಏರಿಕೆ ಬಗ್ಗೆ ಮಾತನಾಡಿದ್ದ ಕಾಂಗ್ರೆಸ್ ಅಧಿಕಾರಕ್ಕೆ ಬಂದ ಕೂಡಲೇ ಬೆಲೆ ಏರಿಕೆಯ ಶಾಕ್ ನೀಡುತ್ತಿದೆ ಎಂದಿದ್ದಾರೆ.

Leave a Reply

Your email address will not be published. Required fields are marked *

error: Content is protected !!