ಬೆಳ್ತಂಗಡಿ: ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ ಮರುತನಿಖೆಗೆ ಆಗ್ರಹಿಸಿ ಶಾಸಕ ಹರೀಶ್ ಪೂಂಜ ವಿಧಾನ ಪರಿಷತ್ ಸದಸ್ಯ ಪ್ರತಾಪ ಸಿಂಹ ನಾಯಕ್’ರಿಂದ ಸಿ.ಎಂ ಸಿದ್ಧರಾಮಯ್ಯರಿಗೆ ಮನವಿ
ಧರ್ಮಸ್ಥಳ ಸಮೀಪ 2012ರಲ್ಲಿ ನಡೆದಿರುವ ಉಜಿರೆ ಕಾಲೇಜಿನ ವಿದ್ಯಾರ್ಥಿನಿ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ಮರುತನಿಖೆಗೆ ಒಳಪಡಿಸಬೇಕೆಂದು ಶಾಸಕ ಹರೀಶ್ ಪೂಂಜ ಮತ್ತು ವಿಧಾನ ಪರಿಷತ್ ಸದಸ್ಯ ಪ್ರತಾಪ ಸಿಂಹ ನಾಯಕ್ ಮುಖ್ಯಮಂತ್ರಿ ಸಿದ್ಧರಾಮಯ್ಯರವರಿಗೆ ಮನವಿ ಸಲ್ಲಿಸಿದ್ದಾರೆ.

ಸಿಬಿಐ ತನಿಖೆ ನಡೆದು ಸಂತೋಷ್ ರಾವ್ ದೋಷಮುಕ್ತಿಗೊಂಡಿದ್ದರು. ಪ್ರಕರಣದಲ್ಲಿ ಅಪರಾಧಿಗಳನ್ನು ಕಾನೂನಿನ ಚೌಕಟ್ಟಿನೊಳಗೆ ತಂದು ಶಿಕ್ಷೆ ನೀಡಲು ಆಡಳಿತ ವ್ಯವಸ್ಥೆ ವಿಫಲವಾಗಿದ್ದು ನೈಜ ಆರೋಪಿಗಳ ಬಂಧನ ಆಗಿಲ್ಲ ಎನ್ನುವ ಆರೋಪ ವ್ಯಾಪಕವಾಗಿ ಕೇಳಿ ಬಂದಿತ್ತು. ಆದ್ದರಿಂದ ಕೂಡಲೇ ಪ್ರಕರಣ ತನಿಖೆ ನಡೆಸಿ ನ್ಯಾಯ ಒದಗಿಸಿಕೊಡಬೇಕೆಂದು ಶಾಸಕ ಹರೀಶ್ ಪೂಂಜ ಮತ್ತು ವಿಧಾನ ಪರಿಷತ್ ಸದಸ್ಯ ಪ್ರತಾಪ ಸಿಂಹ ನಾಯಕ್ ಮುಖ್ಯಮಂತ್ರಿ ಸಿದ್ಧರಾಮಯ್ಯರವರಿಗೆ ಮನವಿ ಸಲ್ಲಿಸಿದ್ದಾರೆ.