ಪಿಎಸ್‌ಐ ಹಗರಣವನ್ನು ನ್ಯಾಯಾಂಗ ತನಿಖೆಗೆ ವಹಿಸಿರುವುದು ರಾಜ್ಯ ಸರ್ಕಾರದ ದ್ವೇಷದ ರಾಜಕಾರಣಕ್ಕೆ ಸಾಕ್ಷಿ- ಬೊಮ್ಮಾಯಿ
ಬೆಂಗಳೂರು: ಪಿಎಸ್‌ಐ ಹಗರಣವನ್ನು ನ್ಯಾಯಾಂಗ ತನಿಖೆಗೆ ವಹಿಸಿರುವ ರಾಜ್ಯ ಸರ್ಕಾರದ ನಡೆ ದ್ವೇಷದ ರಾಜಕಾರಣಕ್ಕೆ ಸಾಕ್ಷಿ ಎಂದು ಬಿಜೆಪಿ ಶಾಸಕ, ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
‘ಪಿಎಸ್‌ಐ ಹಗರಣವನ್ನು ಹೊರಗೆ ತಂದದ್ದೇ ನಮ್ಮ ಸರ್ಕಾರ. ಸಿಐಡಿ ತನಿಖೆಗೂ ಆದೇಶ ಮಾಡಿದ್ದೆವು. ಪ್ರಕರಣದಲ್ಲಿ ಎಡಿಜಿಪಿ ಹುದ್ದೆಯ ಅಧಿಕಾರಿಯನ್ನೇ ಕಾರಾಗೃಹಕ್ಕೆ ಕಳುಹಿಸಿದ್ದೇವೆ. ಹಗರಣದಲ್ಲಿ ಕಾಂಗ್ರೆಸ್‌ನವರೂ ಇದ್ದಾರೆ. ಪ್ರಕರಣದ ತನಿಖೆ ನಡೆದು, ಕೋರ್ಟ್‌ನಲ್ಲಿ ವಿಚಾರಣೆ ನಡೆಯುತ್ತಿದೆ. ಇಂತಹ ಸಮಯದಲ್ಲಿ ಮತ್ತೆ ತನಿಖೆಗೆ ಆದೇಶ ಮಾಡಿದ್ದಾರೆ. ಈ ದ್ವೇಷದ ರಾಜಕಾರಣ ಎಲ್ಲಿಗೆ ಹೋಗುತ್ತಿದೆ ಎನ್ನುವುದು ಗೊತ್ತಾಗುತ್ತಿಲ್ಲ’ ಎಂದರು.