ಕರಾವಳಿ

ಚೆಲ್ಯಡ್ಕ ಸೇತುವೆ ಮತ್ತೆ ಮುಳುಗಡೆ



ಪುತ್ತೂರು: ಬೆಟ್ಟಂಪಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಚೆಲ್ಯಡ್ಕ ಸೇತುವೆ ಈ ಮಳೆಗಾಲದಲ್ಲಿ ಎರಡನೇ ಬಾರಿಗೆ ಸಂಪೂರ್ಣ ಮುಳುಗಡೆಯಾಗಿದೆ. ಸುರಿಯುತ್ತಿರುವ ಬಾರೀ ಮಳೆಯಿಂದಾಗಿ ಇಂದು(ಜು.23) ಸೇತುವೆ ಸಂಪೂರ್ಣ ಮುಳುಗಡೆಯಾಗಿದ್ದು, ಜನರ ಮತ್ತು ವಾಹನ ಸಂಚಾರಕ್ಕೆ ಅಡಚಣೆಯಾಗಿದೆ.

ಮುಳುಗು ಸೇತುವೆ ಎಂದು ಖ್ಯಾತಿ ಪಡೆದಿರುವ ಈ ಸೇತುವೆ ಮುಳುಗಡೆಯಿಂದಾಗಿ ಬಸ್‌ ಸಂಚಾರದಲ್ಲಿ ವ್ಯತ್ಯಯವಾಗಿದೆ. ಈ ಮಾರ್ಗವಾಗಿ ಚಲಿಸುವ ಬಸ್ಸುಗಳು ಸಂಟ್ಯಾರ್‌ ಮಾರ್ಗವಾಗಿ ಪುತ್ತೂರಿಗೆ ತೆರಳಬೇಕಾಯಿತು.

Leave a Reply

Your email address will not be published. Required fields are marked *

error: Content is protected !!