ಸೆಮಿಸ್ಟರ್ ಪರೀಕ್ಷೆ ಮುಂದೂಡಲು ಆಗ್ರಹ: ಅಪಾಯಕಾರಿ ಪರಿಸ್ಥಿತಿಯಲ್ಲಿ ಪರೀಕ್ಷೆಗೆ ಹಾಜರಾದ ವಿದ್ಯಾರ್ಥಿಗಳು
ಭಾರೀ ಮಳೆಗೆ ಸುಬ್ರಹ್ಮಣ್ಯ ಸಮೀಪದ ಕುಮಾರಧಾರ ಬಳಿ ಹೆದ್ದಾರಿ ಜಲಾವೃತಗೊಂಡಿರುವುದರಿಂದ ಪದವಿ ವಿದ್ಯಾರ್ಥಿಗಳು ಅಪಾಯಕಾರಿಯಾಗಿ ಸಂಚರಿಸಿ ಪರೀಕ್ಷೆಗೆ ಹಾಜರಾಗಬೇಕಾದ ಸನ್ನಿವೇಶ ಉಂಟಾಯಿತು.
ಮಂಗಳೂರು ಯೂನಿವರ್ಸಿಟಿ ಸೆಮಿಸ್ಟರ್ ಪರೀಕ್ಷೆ ನಡೆಯುತ್ತಿದ್ದು, ಮಳೆಯ ಕಾರಣ ಪರೀಕ್ಷೆ ಮುಂದೂಡಿಕೆ ಆಗಿರಲಿಲ್ಲ. ಈ ಪರಿಣಾಮ ಪಂಜ ಭಾಗದಿಂದ ಸುಬ್ರಹ್ಮಣ್ಯ ಕೆಎಸ್ಎಸ್ ಕಾಲೇಜಿಗೆ ಪರೀಕ್ಷೆ ಹಾಜರಾಗಲು ಬರುವ ವಿದ್ಯಾರ್ಥಿಗಳು ಜಲಾವೃತಗೊಂಡ ರಸ್ತೆಯಲ್ಲೇ ಸಂಚರಿಸಿ ಪರೀಕ್ಷಾ ಕೇಂದ್ರಗಳತ್ತ ಬಂದಿದ್ದಾರೆ.
ಮುನ್ನೆಚ್ಚರಿಕೆ ಕ್ರಮವಾಗಿ ಮಂಗಳೂರು ವಿಶ್ವವಿದ್ಯಾನಿಲಯ ಸೆಮಿಸ್ಟರ್ ಪರೀಕ್ಷೆ ಮುಂದೂಡಲಿ ಎಂಬ ಆಗ್ರಹ ವ್ಯಕ್ತವಾಗಿದೆ.