ರಾಜ್ಯ

ಮಳೆ ಅವಾಂತರ: ಇಂದು ಡಿಸಿಗಳ ಜೊತೆ ಸಿಎಂ ಸಿದ್ದರಾಮಯ್ಯ ವಿಡಿಯೋ ಸಂವಾದ



ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ ಮತ್ತು ಹಾನಿ ಸಂಭವಿಸಿರುವ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರು ಜು .25, ಮಂಗಳವಾರ ಎಲ್ಲ ಜಿಲ್ಲಾಧಿಕಾರಿಗಳ ಜತೆ ವಿಡಿಯೋ ಸಂವಾದ ನಡೆಸಲಿದ್ದಾರೆ.

ರಾಜ್ಯದ ಬಹುತೇಕ ಭಾಗಗಳಲ್ಲಿ, ವಿಶೇಷವಾಗಿ ಕರಾವಳಿ ಮತ್ತು ಉತ್ತರ ಕರ್ನಾಟಕದಲ್ಲಿ ಭಾರೀ ಮಳೆಯಾಗುತ್ತಿದೆ. ನಿರಂತರ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತವಾಗಿದ್ದು, ಹಲವು ಕಡೆಗಳಲ್ಲಿ ವಸತಿ ಪ್ರದೇಶಗಳು ಜಲಾವೃತವಾಗಿವೆ. ಈ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಅವರು ಸಂವಾದ ನಡೆಸಲಿದ್ದಾರೆ. ಈಗಾಗಲೇ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಅವರಿಂದ ವಿವರವಾದ ವರದಿ ಕೂಡಾ ಕೋರಿದ್ದಾರೆ.

Leave a Reply

Your email address will not be published. Required fields are marked *

error: Content is protected !!