ಕರಾವಳಿಕ್ರೈಂ

ಮಿತ್ತೂರು: ಕಾರು ಹಾಗೂ ಟಿಪ್ಪರ್ ಲಾರಿ ನಡುವೆ ಭೀಕರ ಅಪಘಾತ-ಕಾರಿನಲ್ಲಿದ್ದ ನಾಲ್ವರಿಗೆ ಗಂಭೀರ ಗಾಯ



ಕಾರು ಹಾಗೂ ಟಿಪ್ಪರ್ ಲಾರಿ ನಡುವೆ ನಡೆದ ಭೀಕರ ಅಪಘಾತದಲ್ಲಿ ಕಾರಿನಲ್ಲಿದ್ದ ನಾಲ್ವರು ಗಂಭೀರ ಗಾಯಗೊಂಡ ಘಟನೆ ಮಾಣಿ ಮೈಸೂರು ರಾಜ್ಯ ಹೆದ್ದಾರಿಯ ನೇರಳಕಟ್ಟೆ ಸಮೀಪದ ಪರ್ಲೊಟ್ಟು ಎಂಬಲ್ಲಿ ನಡೆದಿದೆ.

ಮುಂಬೈ ಮೂಲದ ಪ್ರಯಾಣಿಕರು ಮಂಗಳೂರಿನಿಂದ ಮೈಸೂರಿಗೆ ತೆರಳುತ್ತಿದ್ದ ಕಾರು ಹಾಗೂ ಪುತ್ತೂರು ಕಡೆಯಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ಟಿಪ್ಪರ್ ಲಾರಿ ನಡುವೆ ಈ ಅಪಘಾತ ಸಂಭವಿಸಿದೆ.


ಕಾರಿನಲ್ಲಿದ್ದ ಇಬ್ಬರು ಮಹಿಳೆಯರು ಸಹಿತ ನಾಲ್ವರು ಗಾಯಗೊಂಡಿದ್ದು, ಅವರನ್ನು ಪುತ್ತೂರಿನ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ತಿಳಿದು ಬಂದಿದೆ.


Leave a Reply

Your email address will not be published. Required fields are marked *

error: Content is protected !!