ಕರಾವಳಿರಾಜಕೀಯ

ನಿಡ್ಪಳ್ಳಿ ಗ್ರಾಮ ಪಂಚಾಯತ್ ಉಪಚುನಾವಣೆ: ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಸತೀಶ್ ಶೆಟ್ಟಿ ಜಯಭೇರಿ



ಪುತ್ತೂರು: ನಿಡ್ಪಳ್ಳಿ ಗ್ರಾ.ಪಂನ ವಾರ್ಡ್-1ಕ್ಕೆ ನಡೆದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಸತೀಶ್ ಶೆಟ್ಟಿ ಜಯಗಳಿಸಿದ್ದಾರೆ.


ವಾರ್ಡ್-1ರ ಸಾಮಾನ್ಯ ಮೀಸಲು ಕ್ಷೇತ್ರದ ಬಿಜೆಪಿ ಬೆಂಬಲಿತ ಸದಸ್ಯ ಮುರಳಿಕೃಷ್ಣ ಭಟ್ ರವರ ನಿಧನದಿಂದ ತೆರವಾದ ಸ್ಥಾನಕ್ಕೆ ಜು.23ರಂದು ನಡೆದ ಉಪ ಚುನಾವಣೆಯಲ್ಲಿ ಒಟ್ಟು 607 ಮತಗಳ ಪೈಕಿ 529 ಮತಗಳು ಚಲಾವಣೆಯಾಗಿದೆ. ಇದರಲ್ಲಿ ಪುತ್ತಿಲ ಪರಿವಾರ ಬೆಂಬಲಿತ ಅಭ್ಯರ್ಥಿ ಜಗನ್ನಾಥ ರೈ ಕೊಳಂಬೆತ್ತಿಮಾರ್ 208 ಮತ, ಕಾಂಗ್ರೆಸ್ ಬೆಂಬಲಿತ ಸತೀಶ್ ಶೆಟ್ಟಿ 235
ಹಾಗೂ ಬಿಜೆಪಿ ಬೆಂಬಲಿತ ಅಭ್ಯರ್ಥಿ ಚಂದ್ರಶೇಖರ ಪ್ರಭು 85
ಮತಗಳನ್ನು ಪಡೆದುಕೊಂಡಿದ್ದಾರೆ.

Leave a Reply

Your email address will not be published. Required fields are marked *

error: Content is protected !!