ಸೌಜನ್ಯ ಕುಟುಂಬ ಹಾಗೂ ಮಹೇಶ್ ಶೆಟ್ಟಿ ತಿಮರೋಡಿಯವರಿಂದ ಸಿಎಂ ಸಿದ್ದರಾಮಯ್ಯ ಭೇಟಿ
ಬೆಳ್ತಂಗಡಿ: ಸುಮಾರು 11 ವರ್ಷಗಳ ಹಿಂದೆ ಅತ್ಯಾಚಾರಕ್ಕೀಡಾಗಿ ಕೊಲೆಯಾಗಿರುವ ವಿದ್ಯಾರ್ಥಿನಿ ಸೌಜನ್ಯರವರ ಮನೆಯವರು ಮತ್ತು ಪ್ರಜಾಪ್ರಭುತ್ವ ವೇದಿಕೆಯ ಮುಖ್ಯಸ್ಥ ಮಹೇಶ್ ಶೆಟ್ಟಿ ತಿಮರೋಡಿ ಅವರು ಮುಖ್ಯಮಂತ್ರಿ ಸಿದ್ದರಾಮಯಯ್ಯರವರನ್ನು ಬೆಂಗಳೂರಿನಲ್ಲಿ ಭೇಟಿಯಾಗಿ ಮಾತುಕತೆ ನಡೆಸಿದ್ದು ನ್ಯಾಯ ಒದಗಿಸಿಕೊಡುವ ಮನವಿ ಮಾಡಿದ್ದಾರೆ.
ಧರ್ಮಸ್ಥಳ ಗ್ರಾಮದ ಪಾಂಗಳ ನಿವಾಸಿಯಾಗಿದ್ದ ಸೌಜನ್ಯರವರನ್ನು ಅಪಹರಿಸಿ ಅತ್ಯಾಚಾರ ಮಾಡಿ ಬಳಿಕ ಬರ್ಬರವಾಗಿ ಕೊಲೆ ಮಾಡಲಾಗಿದ್ದ ಪ್ರಕರಣದ ತೀರ್ಪು ಇತ್ತೀಚೆಗೆ ಬಂದಿದ್ದು ನೈಜ ಆರೋಪಿಗಳು ಕಾನೂನಿನ ಕುಣಿಕೆಯಿಂದ ತಪ್ಪಿಸಿಕೊಂಡಿದ್ದಾರೆ ಎನ್ನುವ ಆರೋಪ ಕೇಳಿ ಬಂದಿದೆ.
ಇದೀಗ ಸೌಜನ್ಯರವರ ತಂದೆ ಚಂದಪ್ಪ ಗೌಡ, ತಾಯಿ ಕುಸುಮಾವತಿ, ಸಹೋದರಿ ಮತ್ತು ಸೌಜನ್ಯ ಪರ ಹೋರಾಟದ ಮುಂಚೂಣಿಯಲ್ಲಿರುವ ರಾಷ್ಟ್ರೀಯ ಹಿಂದು ಜಾಗರಣ ವೇದಿಕೆಯ ಮುಖಂಡ ತಿಮರೋಡಿ ಮಹೇಶ್ ಶೆಟ್ಟಿಯವರು ಮುಖ್ಯಮಂತ್ರಿ ಸಿದ್ದರಾಮಯ್ಯರವರನ್ನು ಭೇಟಿಯಾಗಿದ್ದಾರೆ.