ರಾಜ್ಯದಲ್ಲಿ ಪ್ರಶ್ನೆಪತ್ರಿಕೆ ಸೋರಿಕೆಯ ಉದ್ಯಮವೇ ಇದೆ: ರಾಜಸ್ಥಾನ ಸರಕಾರದ ವಿರುದ್ಧ ಪ್ರಧಾನಿ ಮೋದಿ ವಾಗ್ದಾಳಿ
ಯುವಕರ ಕನಸುಗಳು ಸಾಕಾರಗೊಳ್ಳಬೇಕೆಂದರೆ ಕಾಂಗ್ರೆಸ್ ಸರ್ಕಾರವನ್ನು ಕಿತ್ತೊಗೆಯಬೇಕು’ ಎಂದು ಮುಖ್ಯಮಂತ್ರಿ ಅಶೋಕ್ ಗೆಹಲೋತ್ ಗುರಿಯಾಗಿಸಿ ಪ್ರಧಾನಿ ಮೋದಿ ವಾಗ್ದಾಳಿ ನಡೆಸಿದರು.
ವಿವಿಧ ಯೋಜನೆಗಳಿಗೆ ಚಾಲನೆ ನೀಡಲು ರಾಜಸ್ತಾನಕ್ಕೆ ಕ್ಕೆ ಭೇಟಿ ನೀಡಿ ಸಾರ್ವಜನಿಕ ರ‍್ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ಅವರು ರಾಜಸ್ಥಾನದಲ್ಲಿ ಈವರೆಗೂ ನಡೆದ ಹಲವು ನೇಮಕಾತಿಗೆ ಸಂಬಂಧಿಸಿದ ಪರೀಕ್ಷೆಗಳ ಪ್ರಶ್ನೆ ಪತ್ರಿಕೆಗಳು ಸೋರಿಕೆಯಾಗಿವೆ. ಇದನ್ನು ಗಮನಿಸಿದರೆ ರಾಜ್ಯದಲ್ಲಿ ಪ್ರಶ್ನೆಪತ್ರಿಕೆ ಸೋರಿಕೆಯ ಉದ್ಯಮವೇ ಇದೆ’ ಎಂದು ಪ್ರಧಾನಿ ನರೇಂದ್ರ ಮೋದಿ ರಾಜ್ಯ ಸರ್ಕಾರದ ವಿರುದ್ಧ ಅಸಮಾಧಾನ ಹೊರ ಹಾಕಿದ್ದಾರೆ.