ರಾಜಕೀಯರಾಜ್ಯ

ಪ್ರತಿಪಕ್ಷಗಳ ಸುಳ್ಳುಗಳಿಗೆ ನೀವೂ ದಾಳವಾಗಬೇಡಿ, ಏನೇ ಅಸಮಾಧಾನಗಳಿದ್ದರೂ ನನ್ನ ಬಳಿ ಚರ್ಚಿಸಿ- ಶಾಸಕರಿಗೆ ಸಿಎಂ ಸಿದ್ದರಾಮಯ್ಯ ಎಚ್ಚರಿಕೆ



ಪ್ರತಿಪಕ್ಷಗಳ ಸುಳ್ಳುಗಳಿಗೆ ದಾಳವಾಗಬೇಡಿ. ಏನೇ ಅಸಮಾಧಾನಗಳಿದ್ದರೂ ನನ್ನ ಬಳಿ ಚರ್ಚಿಸಿ ಅಥವಾ ಪಕ್ಷದ ವೇದಿಕೆಯಲ್ಲಿ ಹೇಳಿಕೊಳ್ಳಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪಕ್ಷದ ಶಾಸಕರಿಗೆ ಎಚ್ಚರಿಕೆ ನೀಡಿದ್ದಾರೆ.

ಕಾಂಗ್ರೆಸ್ ಪಕ್ಷದ ಶಾಸಕಾಂಗ ಸಭೆಯಲ್ಲಿ ಶಾಸಕರನ್ನು ಉದ್ದೇಶಿಸಿ ಮಾತನಾಡಿದ ಅವರು, ಕರ್ನಾಟಕ ರಾಜ್ಯದ ಜನತೆ ಈ ವಿಧಾನಸಭಾ ಚುನಾವಣೆಯಲ್ಲಿ ನೀಡಿರುವ ತೀರ್ಪು ಇಡಿ ದೇಶದ ರಾಜಕಾರಣಕ್ಕೆ ಗೇಮ್ ಚೇಂಜರ್ ಎನ್ನುವ ವಿಶ್ಲೇಷಣೆಗಳು ರಾಷ್ಟ್ರೀಯ, ಅಂತಾರಾಷ್ಟ್ರೀಯ ಮಾಧ್ಯಮಗಳಲ್ಲಿ ವ್ಯಕ್ತವಾಗಿದೆ. ಹೀಗಾಗಿ ಸುಳ್ಳಿನ‌ ಸರಮಾಲೆಗಳ ಮೂಲಕ ಪ್ರತಿಪಕ್ಷಗಳು ಐದು ಗ್ಯಾರಂಟಿಗಳ ಯಶಸ್ಸು ಮತ್ತು ಜನರ ಗಮನವನ್ನು ಬೇರೆಡೆಗೆ ಸೆಳೆಯುತ್ತಾರೆ ಎಂದು ಹೇಳಿದರು.

ಪ್ರತಿಪಕ್ಷಗಳ ಸುಳ್ಳುಗಳು ಮತ್ತು ಆ ಮೂಲಕ ಗಮನ ಬೇರೆಡೆ ಸೆಳೆಯುವ ತಂತ್ರಗಾರಿಕೆ ಬಗ್ಗೆ ಪ್ರತಿಯೊಬ್ಬ ಶಾಸಕರೂ ಎಚ್ಚರದ ಸ್ಥಿತಿಯಲ್ಲಿರಬೇಕು. ಅವರ ಸುಳ್ಳುಗಳಿಗೆ ನೀವೂ ದಾಳ ಆಗಬೇಡಿ, ಎಂದು ಕಿವಿಮಾತು ಹೇಳಿದರು.

ಆಡಳಿತಾತ್ಮಕ ಒತ್ತಡಗಳ ನಡುವೆಯೂ ನಾನು ತಿಂಗಳಿಗೊಮ್ಮೆ ಜಿಲ್ಲಾವಾರು ಶಾಸಕರ ಸಭೆ ಕರೆಯುತ್ತೇನೆ. ಕ್ಷೇತ್ರದ ಕುಂದು ಕೊರತೆಗಳ ಬಗ್ಗೆ ಚರ್ಚಿಸುತ್ತೇನೆ. ಸರ್ಕಾರದಿಂದ ತುರ್ತಾಗಿ ಆಗಬೇಕಿರುವ ಕೆಲಸಗಳು ಸಮರ್ಪಕವಾಗಿ ಆಗುವಂತೆ ನೋಡಿಕೊಳ್ಳುತ್ತೇನೆ. ಏನೇ ಅಸಮಾಧಾನಗಳಿದ್ದರೂ ನೇರವಾಗಿ ನನಗೆ ಹೇಳಿ, ಪಕ್ಷದ ವೇದಿಕೆಯಲ್ಲಿ ಚರ್ಚಿಸಿ ಎಂದು ಶಾಸಕರಿಗೆ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.

Leave a Reply

Your email address will not be published. Required fields are marked *

error: Content is protected !!