ಉಡುಪಿ ವಿಡಿಯೋ ಪ್ರಕರಣ: ಸಿದ್ದರಾಮಯ್ಯ ಕುಟುಂಬದ ಮಹಿಳೆಯರ ವಿರುದ್ಧ ಅವಹೇಳನಕಾರಿ ಪೋಸ್ಟ್ ಹಾಕಿದ್ದ ಬಿಜೆಪಿ ಕಾರ್ಯಕರ್ತೆ ಶಕುಂತಳ ಪೊಲೀಸ್ ವಶಕ್ಕೆ
ಮುಖ್ಯಮಂತ್ರಿ ಸಿದ್ದರಾಮಯ್ಯ ಕುಟುಂಬದ ಮಹಿಳೆಯರ ವಿರುದ್ಧ ಅವಹೇಳನಕಾರಿ ಪೋಸ್ಟ್ ಹಾಕಿದ್ದ ಬಿಜೆಪಿ ಕಾರ್ಯಕರ್ತೆ ಶಕುಂತಲ ಎಂಬವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಉಡುಪಿಯ ಖಾಸಗಿ ಕಾಲೇಜಿನ ಶೌಚಾಲಯದಲ್ಲಿ ವಿಡಿಯೋ ಚಿತ್ರೀಕರಣಕ್ಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿದ್ದರಾಮಯ್ಯ ಕುಟುಂಬದ ಮಹಿಳೆಯರ ಕುರಿತು ತುಮಕೂರು ಮೂಲದ ಬಿಜೆಪಿ ಕಾರ್ಯಕರ್ತೆ ಶಕುಂತಲ, ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಹಾಕಿದ್ದರು. ಈ ಸಂಬಂಧ ಬೆಂಗಳೂರಿನ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದು, ಶಕುಂತಲಾಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ
ಉಡುಪಿ ಕಾಲೇಜಿನ ಶೌಚಾಲಯದಲ್ಲಿ ಚಿತ್ರೀಕರಣ ಬಗ್ಗೆ ಟ್ವೀಟ್ ಮಾಡಿದ್ದ ಶಕುಂತಲಾ, ಮುಸ್ಲಿಂ ಯುವತಿಯರು ಟಾಯ್ಲೆಟ್ ನಲ್ಲಿ ಕ್ಯಾಮೆರಾ ಇಟ್ಟು ಹಿಂದೂ ಹೆಣ್ಣುಮಕ್ಕಳ ವಿಡಿಯೋ ಮಾಡಿದ್ದು ಕಾಂಗ್ರೆಸ್ನವರ ಪ್ರಕಾರ ಮಕ್ಕಳಾಟವಂತೆ. ಸಿದ್ದರಾಮಯ್ಯನವರ ಸೊಸೆ ಅಥವಾ ಹೆಂಡ್ತಿ ಅವರ ವಿಡಿಯೋವನ್ನು ಇದೆ ತರ ಮಾಡಿದ್ರೆ ಅದನ್ನು ಮಕ್ಕಳಾಟ ಅಂತ ಒಪ್ಕೋತೀರಾ? ಎಂದು ಸಿದ್ದರಾಮಯ್ಯನವರಿಗೆ ಟ್ಯಾಗ್ ಮಾಡಿ ಟ್ವೀಟ್ ಮಾಡಿದ್ದರು. ಇದರ ವಿರುದ್ಧ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು ಇದೀಗ ಶಕುಂತಲಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡು ವಿಚಾರಣೆಗೊಳಪಡಿಸಿದ್ದಾರೆ.