ಜಿಲ್ಲೆ

ಜಲಪಾತದಲ್ಲಿ ನೀರುಪಾಲಾದ ಯುವಕ: ನಿರಂತರ ಹುಡುಕಾಟ



ಕುಂದಾಪುರ ತಾಲೂಕಿನ ಕೊಲ್ಲೂರು ಸಮೀಪದ ಅರಶಿನ ಗುಂಡಿ ಜಲಪಾತದಲ್ಲಿ ಕಳೆದ ಭಾನುವಾರ ಕಾಲು ಜಾರಿ ಬಿದ್ದು ನೀರುಪಾಲಾದ ಭದ್ರಾವತಿಯ ಶರತ್‌ ಕುಮಾರ್‌ (23. ವ) ಅವರ ಪತ್ತೆಗಾಗಿ 5ನೇ ದಿನವೂ ಹುಡುಕಾಟ ನಡೆಯಿತು. ಆದರೆ ಯಾವುದೇ ಸುಳಿವು ಲಭ್ಯವಾಗಿಲ್ಲ.

ಕಳೆದ 5 ದಿನಗಳಿಂದಲೂ ಕೊಲ್ಲೂರು ಪೊಲೀಸರು, ರಾಜ್ಯ ವಿಪತ್ತು ನಿರ್ವಹಣ ತಂಡ (ಎಸ್‌ಡಿಆರ್‌ಎಫ್‌), ಅರಣ್ಯ ಇಲಾಖೆ ಸಿಬಂದಿ, ಅಗ್ನಿ ಶಾಮಕ ದಳದ ಸಿಬಂದಿ, ಸ್ಥಳೀಯರು, ಶರತ್‌ ಅವರ ಸ್ನೇಹಿತರು, ಸಂಬಂಧಿಕರು ಪ್ರತೀ ದಿನ ಹಗಲಿಡೀ ನಿರಂತರ ಹುಡುಕಾಟ ನಡೆಸುತ್ತಿದ್ದಾರೆ. ಆದರೆ ಯಾವುದೇ ಪ್ರಯೋಜನ ಆಗಿಲ್ಲ. ಹುಡುಕಾಟ ಕಾರ್ಯ ಮುಂದುವರಿಯಲಿದೆ ಎಂದು ತಿಳಿದು ಬಂದಿದೆ.

Leave a Reply

Your email address will not be published. Required fields are marked *

error: Content is protected !!