ಬಿಜೆಪಿ ರಾಜ್ಯಾಧ್ಯಕ್ಷರಾಗಿ ಸಿಟಿ ರವಿ ಬಹುತೇಕ ಖಚಿತ
ಬಿಜೆಪಿ ಪಕ್ಷ ಕೇಂದ್ರ ಪದಾಧಿಕಾರಿಗಳ ಪಟ್ಟಿ ಬಿಡುಗಡೆ ಮಾಡಿದ್ದು, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿದ್ದ ಕರ್ನಾಟಕದ ಸಿ.ಟಿ ರವಿ ಅವರನ್ನು ಕೈಬಿಟ್ಟು ಅವರ ಸ್ಥಾನಕ್ಕೆ ತೆಲಂಗಾಣದ ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ ಬಂಡಿ ಸಂಜಯ್ ಕುಮಾರ್ ಅವರನ್ನು ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ನೇಮಿಸಲಾಗಿದೆ. ಬಿ.ಎಲ್ ಸಂತೋಷ್ ಅವರು ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿಯಾಗಿ ಮುಂದುವರಿದಿದ್ದಾರೆ.

ಕೇಂದ್ರೀಯ ಪದಾಧಿಕಾರಿ ಹುದ್ದೆಯಿಂದ ಸಿಟಿ ರವಿ ಅವರನ್ನು ಕೆಳಗಿಳಿಸಿದರ ಹಿಂದೆ ರಾಜ್ಯಾಧ್ಯಕ್ಷ ಹುದ್ದೆಯನ್ನು ಅವರಿಗೆ ನೀಡುವ ಯೋಚನೆ ಇದೆ ಎನ್ನಲಾಗಿದೆ. ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರ ಅವಧಿ ಅಂತ್ಯವಾಗಿದ್ದು ಚುನಾವಣೆಯ ಹಿನ್ನೆಲೆಯಲ್ಲಿ ಅವರನ್ನೇ ಮುಂದುವರಿಸಲಾಗಿತ್ತು. ಇದೀಗ ಇದು ಚಿಕ್ಕಮಗಳೂರಿನ ಮಾಜಿ ಶಾಸಕ ಸಿಟಿ ರವಿಯವರಿಗೆ ಒಲಿಯುವ ಸಾಧ್ಯತೆ ನಿಶ್ಚಲವಾಗಿದೆ