ಜಿಲ್ಲೆ

ಜಲಪಾತ ವೀಕ್ಷಣೆ ಮಾಡುವ ವೇಳೆ ನೀರು ಪಾಲಾಗಿದ್ದ ಯುವಕನ ಮೃತದೇಹ ವಾರದ ಬಳಿಕ ಪತ್ತೆ



ಕುಂದಾಪುರ ತಾಲೂಕಿನ ಕೊಲ್ಲೂರಿನ ಅರಶಿನ ಗುಂಡಿ ಜಲಪಾತ ವೀಕ್ಷಣೆ ಮಾಡಲು ಹೋಗಿ ಜಾರಿ ಬಿದ್ದು ನೀರುಪಾಲಾಗಿದ್ದ ಭದ್ರಾವತಿ ಮೂಲದ ಯುವಕ ಶರತ್ ಮೃತದೇಹ ವಾರದ ಬಳಿಕ ಪತ್ತೆಯಾಗಿದೆ.

ಜುಲೈ 23ರಂದು ಕೊಲ್ಲೂರು ಸಮೀಪದ ಅರಣ್ಯ ಪ್ರದೇಶದಲ್ಲಿರುವ ಅರಶಿನ ಗುಂಡಿ ಜಲಪಾತ ನೋಡಲು ಸ್ನೇಹಿತನೊಂದಿಗೆ ಶರತ್ ಕುಮಾರ್ ಹೋಗಿದ್ದರು. ಜಲಪಾತದ ಪಕ್ಕದ ಬಂಡೆ ಕಲ್ಲಿನ ಮೇಲೆ ನಿಂತಿದ್ದ ಅವರು ಏಕಾಏಕಿ ಜಾರಿ ನೀರಿಗೆ ಬಿದ್ದಿದ್ದರು.

ಸತತ ಕಾರ್ಯಾಚರಣೆ ಬಳಿಕ ಇದೀಗ ಜು. 30ರಂದು ಬಿದ್ದ ಜಾಗದಿಂದ ಹತ್ತು ಮೀಟರ್ ದೂರದಲ್ಲಿ ಶವ ಪತ್ತೆಯಾಗಿದೆ ಎಂದು ವರದಿಯಾಗಿದೆ.

Leave a Reply

Your email address will not be published. Required fields are marked *

error: Content is protected !!