ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದ ಬಗ್ಗೆ ಸಿ.ಟಿ ರವಿ ಹೇಳಿದ್ದೇನು ಗೊತ್ತಾ..?
ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಸ್ಥಾನಕ್ಕೆ ಸಿಟಿ ರವಿ ಅವರ ಹೆಸರು ಕೇಳಿ ಬಂದಿದ್ದು ಇದಕ್ಕೆ ಸಿಟಿ ರವಿ ಪ್ರತಿಕ್ರಿಯೆ ನೀಡಿದ್ದಾರೆ. ನಾನು ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದ ಆಕಾಂಕ್ಷಿಯಲ್ಲ. ಪಕ್ಷದ ರಾಜ್ಯಾಧ್ಯಕ್ಷ ಎನ್ನುವುದು ಜವಾಬ್ದಾರಿಯುತವಾದ ಸ್ಥಾನ. ಹುದ್ದೆಯನ್ನು ಕೇಳಿ ಪಡೆಯುವಂತದ್ದಲ್ಲ, ಈ ಬಗ್ಗೆ ಪಕ್ಷ ನಿರ್ಧರಿಸುತ್ತೆ ಎಂದು ಅವರು ಹೇಳಿದ್ದಾರೆ.

ಬಿಜೆಪಿ ರಾಷ್ಟ್ರೀಯ ಪ್ರ.ಕಾರ್ಯದರ್ಶಿ ಹುದ್ದೆಯಿಂದ ಕೊಕ್ ಕೊಟ್ಟಿರುವ ಬಗ್ಗೆ ಪ್ರತಿಕ್ರಿಯಿಸಿದ ಸಿ.ಟಿ.ರವಿ, ಪಕ್ಷದ ಯಾವುದೇ ಹುದ್ದೆ, ಅಧಿಕಾರ ಶಾಶ್ವತ ಅಲ್ಲ. 35 ವರ್ಷ ಹಿಂದೆ ಬೂತ್ ಅಧ್ಯಕ್ಷನಾಗಿ ಕೆಲಸ ಆರಂಭಿಸಿದ್ದೆ. ಈವರೆಗೂ ಪಕ್ಷ ನೀಡಿದ ಹಲವು ಹುದ್ದೆಗಳಲ್ಲಿ ಕೆಲಸ ಮಾಡಿದ್ದೇನೆ. ಮುಂದೆ ಪಕ್ಷದ ಕಾರ್ಯಕರ್ತನಾಗಿ ನನ್ನ ಕೆಲಸ ಮುಂದುವರಿಸುತ್ತೇನೆ ಎಂದರು.