ವಿಟ್ಲ: ಅಪ್ರಾಪ್ತ ದಲಿತ ಬಾಲಕಿಯ ಮೇಲೆ ಅತ್ಯಾಚಾರ-ಮೂವರು ಅರೆಸ್ಟ್
ವಿಟ್ಲ: ಅಪ್ರಾಪ್ತ ದಲಿತ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿದ ಮೂವರು ಆರೋಪಿಗಳನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ.

ಮೂಡಬಿದರೆ ಮೂಲದ ಪ್ರಸ್ತುತ ಬೆರಿಪದವಿ ನಿವಾಸಿ ಅಕ್ಷಯ್ ದೇವಾಡಿಗ, ಬಾಯಾರು ಗ್ರಾಮದ ಕೊಜಪ್ಪ ನಿವಾಸಿ ಕಮಲಾಕ್ಷ ಬೆಳ್ಚಾಡ, ಬೆರಿಪದವು ನಿವಾಸಿ ಸುಕುಮಾರ ಬೆಳ್ಚಾಡ ಬಂಧಿತ ಆರೋಪಿಗಳು.
ವಿಟ್ಲ ಠಾಣೆಯಲ್ಲಿ ಪೊಕ್ಸೋ ಹಾಗೂ ದಲಿತ ದೌರ್ಜನ್ಯ ಪ್ರಕರಣ ದಾಖಲಾಗಿದ್ದು, ಯುವತಿ ನೀಡಿದ ಮಾಹಿತಿಯಂತೆ ಮೂರು ಮಂದಿಯ ಬಂಧನ ಮಾಡಲಾಗಿದೆ.