ಬಿಜೆಪಿ ಅವಧಿಯ ಕೊರೊನಾ ಹಗರಣಗಳ ಬಗ್ಗೆ ತನಿಖೆಗೆ ಚಿಂತನೆ: ದಿನೇಶ್ ಗುಂಡೂರಾವ್
ಬೆಂಗಳೂರು: ಬಿಜೆಪಿ ಅವಧಿಯ ಕೊರೊನಾ ಹಗರಣಗಳ ಬಗ್ಗೆ ತನಿಖೆ ನಡೆಸುತ್ತೇವೆ. ಕೊರೊನಾ ಹಗರಣವನ್ನು ನ್ಯಾಯಾಂಗ ತನಿಖೆಗೆ ವಹಿಸುವ ಚಿಂತನೆ ಇದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ನ್ಯಾಯಾಂಗ ತನಿಖೆ ವಿಚಾರವನ್ನು ಮುಖ್ಯಮಂತ್ರಿಯವರ ಮುಂದೆ ಪ್ರಸ್ತಾಪಿಸಿದ್ದೇವೆ. ಸಾರ್ವಜನಿಕರ ಹಣ ದುರುಪಯೋಗದ ಬಗ್ಗೆ ವರದಿ ಬಂದಿದೆ. ಕೊರೊನಾ ಹಗರಣದ ಬಗ್ಗೆ ತನಿಖೆ ನಡೆಸುವುದು ನಿಶ್ಚಿತ ಎಂದು ಬೆಂಗಳೂರಿನಲ್ಲಿ ದಿನೇಶ್ ಗುಂಡೂರಾವ್ ಹೇಳಿದರು.