ಲಾಲು ಪ್ರಸಾದ್ ಯಾದವ್ ಅವರ ಕುಟುಂಬದ ಆಸ್ತಿ ಜಫ್ತಿ ಮಾಡಿದ ED
RJD ಹಿರಿಯ ನಾಯಕ ಲಾಲು ಪ್ರಸಾದ್ ಯಾದವ್ ಮತ್ತು ಅವರ ಕುಟುಂಬದ ಮೇಲೆ ಜಾರಿ ನಿರ್ದೇಶನಾಲಯ (ED) ದಾಳಿ ಮಾಡಿದೆ.

ನ್ಯೂ ಫ್ರೆಂಡ್ಸ್ ಕಾಲೋನಿಯಲ್ಲಿರುವ ವಸತಿ ಗೃಹ ಸೇರಿದಂತೆ ಯಾದವ್ ಕುಟುಂಬದ ದೆಹಲಿ ಮತ್ತು ಪಾಟ್ನಾದ ಒಟ್ಟು 6 ಕೊಟಿ ಆಸ್ತಿಯನ್ನು ಇಡಿ ವಶಕ್ಕೆ ಪಡೆದುಕೊಂಡಿದೆ. ಯುಪಿಎ-1 ಸರ್ಕಾರದಲ್ಲಿ ಲಾಲು ಪ್ರಸಾದ್ ರೈಲ್ವೇ ಸಚಿವರಾಗಿದ್ದಾಗ ನಡೆದ ಉದ್ಯೋಗ ಹಗರಣಕ್ಕೆ ಸಂಬಂಧಿಸಿ ಈ ದಾಳಿ ನಡೆದಿದೆ ಎನ್ನಲಾಗಿದೆ.