ಮಂಗಳೂರಿಗೆ ಆಗಮಿಸಿದ ಸಿಎಂ ಸಿದ್ದರಾಮಯ್ಯ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿ ಬಳಿಕ ಉಡುಪಿಗೆ ತೆರಳಿದ್ದಾರೆ. ಉಡುಪಿಯಲ್ಲಿ ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ನಡೆಯಲಿರುವ ಉಡುಪಿ ಜಿಲ್ಲಾ ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗವಹಿಸಲಿದ್ದಾರೆ.
ಉಡುಪಿಯಲ್ಲಿ ಸಭೆ ಮುಗಿಸಿ ಮಧ್ಯಾಹ್ನ 3.30ಕ್ಕೆ ರಸ್ತೆ ಮೂಲಕ ತೆರಳುವ ಸಿದ್ದರಾಮಯ್ಯ ಅವರು ಸಂಜೆ 4.15ಕ್ಕೆ ಮಂಗಳೂರು ತಲುಪುವ ನಿರೀಕ್ಷೆಯಿದೆ. ನಂತರ ಮಂಗಳೂರಿನ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಪ್ರಗತಿ ಪರಿಶೀಲನಾ ಸಭೆ ನಡೆಸಲಿದ್ದಾರೆ.