ಕರಾವಳಿಜಿಲ್ಲೆ

ಉಡುಪಿ ವಿಡಿಯೋ ಪ್ರಕರಣ: ಪುತ್ತೂರಿನಲ್ಲಿ ಎಬಿವಿಪಿ ಪ್ರತಿಭಟನೆ



ಪುತ್ತೂರು: ಉಡುಪಿಯ ಕಾಲೇಜೊಂದರಲ್ಲಿ ನಡೆದ ವಿದ್ಯಾರ್ಥಿನಿಯರ ವಿಡಿಯೋ ಚಿತ್ರೀಕರಣ ಪ್ರಕರಣದ ವಿರುದ್ಧ ಎಬಿವಿಪಿ ವಿದ್ಯಾರ್ಥಿ ಸಂಘಟನೆ ವತಿಯಿಂದ ಆ.1ರಂದು ಪುತ್ತೂರು ನೆಹರೂ ನಗರದಲ್ಲಿ ಪ್ರತಿಭಟನೆ ನಡೆಯಿತು.

ನೂರಾರು ವಿದ್ಯಾರ್ಥಿಗಳು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು. ರಾಜ್ಯ ಕಾಂಗ್ರೆಸ್ ಸರಕಾರ ಹಾಗೂ ಸಿಎಂ ಸಿದ್ದರಾಮಯ್ಯ ಅವರಿಗೆ ಧಿಕ್ಕಾರ ಕೂಗಿದ ಪ್ರತಿಭಟನಾಕಾರರು ಮಹಿಳೆಯರಿಗೆ ಅವಮಾನ ಮಾಡುವುದನ್ನು ಸಹಿಸಿಕೊಳ್ಳಲು ಸಾಧ್ಯವಿಲ್ಲ, ಪ್ರಕರಣವನ್ನು ಕೂಲಂಕುಷ ತನಿಖೆ ನಡೆಸಬೇಕೆಂದು ಒತ್ತಾಯಿಸಿದರು. 

ಪ್ರಕರಣವನ್ನು ಮುಚ್ಚಿ ಹಾಕಲು ಕಾಂಗ್ರೆಸ್ ಸರಕಾರ ಪ್ರಯತ್ನಿಸುತ್ತಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು. ಹಿಂದೂ ಸಂಘಟನೆಗಳ ಮುಖಂಡ ಅರುಣ್ ಕುಮಾರ್ ಪುತ್ತಿಲ ಪ್ರತಿಭಟನೆಗೆ ಆಗಮಿಸಿ ಬೆಂಬಲ ಸೂಚಿಸಿದರು.

Leave a Reply

Your email address will not be published. Required fields are marked *

error: Content is protected !!