ಕರಾವಳಿರಾಜ್ಯ

ಮಂಗಳೂರು: ಮಳೆಯಿಂದ ಮನೆ ಸಂಪೂರ್ಣ ಹಾನಿಯಾದವರಿಗೆ ಕೂಡಲೇ 5 ಲಕ್ಷ ರೂಪಾಯಿ ಪರಿಹಾರ ವಿತರಿಸುವಂತೆ ಸಿಎಂ ಸಿದ್ದರಾಮಯ್ಯ ಆದೇಶಮಂಗಳೂರು: ಮನೆ ಸಂಪೂರ್ಣ ಹಾನಿಯಾದವರಿಗೆ ಕೂಡಲೇ 5 ಲಕ್ಷ ರೂಪಾಯಿ ಪರಿಹಾರ ವಿತರಿಸುವಂತೆ ಮುಖ್ಯಮಂತ್ರಿ ಅವರು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮಹಿಲನ್‌ ಅವರಿಗೆ ಸೂಚಿಸಿದ್ದಾರೆ. ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಆ . 1ರಂದು ಸಂಜೆ ನಡೆದ ಪ್ರಗತಿ ಪರಿಶೀಲನೆ ಸಭೆಯಲ್ಲಿ ಸೂಚನೆ ನೀಡಿದರು.

ಮುಖ್ಯಮಂತ್ರಿ ಆದ ನಂತರ ಮೊದಲ ಬಾರಿಗೆ ಜಿಲ್ಲೆಗೆ ಭೇಟಿ ನೀಡಿದ್ದೇನೆ ಎಂದು ಹೇಳಿದ ಸಿದ್ದರಾಮಯ್ಯ, ಮುಂಗಾರು ಮಳೆ ಜೂನ್ ನಲ್ಲಿ ಪ್ರಾರಂಭವಾಗಬೇಕಿತ್ತು. ಆದರೆ ಈ ಬಾರಿ ವಾಡಿಕೆಯಷ್ಟು ಮುಂಗಾರು ಸುರಿದಿಲ್ಲ. ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿ ವಾಡಿಕೆಗಿಂತ ಮಳೆ ಕಡಿಮೆಯಾಗಿದೆ. ಆದರೆ ಜುಲೈನಲ್ಲಿ ವಾಡಿಕೆಗಿಂತ ಶೇ.21 ರಷ್ಟು ಮಳೆ ಜಾಸ್ತಿಯಾಗಿದೆ ಎಂದರು.

Leave a Reply

Your email address will not be published. Required fields are marked *

error: Content is protected !!