ಕ್ರೈಂಜಿಲ್ಲೆ

ಕಾರ್ಕಳ: ಅನೈತಿಕ ಪೊಲೀಸ್ ಗಿರಿ- ಐದು ಮಂದಿ ಹಿಂದೂ ಸಂಘಟನೆ ಕಾರ್ಯಕರ್ತರ ಬಂಧನ



ಕಾರಿನಲ್ಲಿ ಹೋಗುತ್ತಿದ್ದ ವೈದ್ಯರು ಹಾಗೂ ಪ್ರಾಧ್ಯಾಪಕರನ್ನು ತಡೆದು ಅನೈತಿಕ ಪೊಲೀಸ್ ಗಿರಿ ನಡೆಸಿದ ಆರೋಪದಲ್ಲಿ ಐವರು ಹಿಂದೂ ಸಂಘಟನೆ ಕಾರ್ಯಕರ್ತರನ್ನು ಕಾರ್ಕಳ ನಗರ ಪೊಲೀಸರು ಬಂಧಿಸಿರುವ ಘಟನೆ ಬೆಳಕಿಗೆ ಬಂದಿದೆ.

ಬಂಧಿತ ಆರೋಪಿಗಳನ್ನು ಸಂತೋಷ್, ಕಾರ್ತಿಕ್ ಪೂಜಾರಿ, ಸುನೀಲ್ ಮೂಲ್ಯ, ಸಂದೀಪ್ ಪೂಜಾರಿ, ಸುಜಿತ್ ಸಫಲಿಗ ಎಂದು ಗುರುತಿಸಲಾಗಿದೆ.

ಜು.29ರಂದು ಮಂಗಳೂರಿನ ಕಾಲೇಜೊಂದರ ನಾಲ್ವರು ವೈದ್ಯರು ಹಾಗೂ ಅದೇ ಕಾಲೇಜಿನ ಇಬ್ಬರು ಮಹಿಳಾ ಪ್ರೊಫೆಸರ್ ಅವರೊಂದಿಗೆ ಒಂದೇ ಕಾರಿನಲ್ಲಿ ತೆರಳುತ್ತಿದ್ದಾಗ ಕಾರ್ಕಳದ ಕುಂಟಲ್ಪಾಡಿ ಎಂಬಲ್ಲಿ ಹಿಂದೂ ಸಂಘಟನೆಗೆ ಸೇರಿದ ಐದು ಮಂದಿ ಕಾರನ್ನು ಅಡ್ಡಗಟ್ಟಿ ಅವಾಚ್ಯ ಶಬ್ದಗಳಿಂದ ನಿಂದಿಸಿ ಬೆದರಿಕೆ ಹಾಕಿದ್ದಾರೆಂದು ತಿಳಿದು ಬಂದಿದೆ.

ಕಾರ್ಕಳ ಡಿವೈಎಸ್ಪಿ ಅರವಿಂದ ಕಲ್ಲಗುಜ್ಜೆ, ಪೊಲೀಸ್ ವೃತ್ತ ನಿರೀಕ್ಷಕ ನಾಗರಾಜ್, ಎಸ್ಸೈ ಸಂದೀಪ್ ಶೆಟ್ಟಿ ನೇತೃತ್ವದಲ್ಲಿ ಐವರನ್ನು ವಶಕ್ಕೆ ಪಡೆದುಕೊಂಡಿದ್ದಾರೆಂದು ತಿಳಿದುಬಂದಿದೆ. ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

error: Content is protected !!