ದ.ಕ ಜಿಲ್ಲೆಯಲ್ಲಿ ಮುಂದುವರಿದ ಅನೈತಿಕ ಪೊಲೀಸ್ ಗಿರಿ: ಆಟೋ ರಿಕ್ಷಾ ಚಾಲಕನ ಮೇಲೆ ಹಲ್ಲೆ
ಬೆಳ್ತಂಗಡಿ: ದಕ ಜಿಲ್ಲೆಯಲ್ಲಿ ಅನೈತಿಕ ಪೊಲೀಸ್ ಗಿರಿ ಮುಂದುವರಿದಿದೆ. ಧರ್ಮಸ್ಥಳ ಬಸ್ ನಿಲ್ದಾಣಕ್ಕೆ ಬಾಡಿಗೆಗೆ ಹೋಗಿದ್ದ ಆಟೋ ರಿಕ್ಷಾ ಚಾಲಕನಿಗೆ ಅಪರಿಚಿತರು ತೀವ್ರ ಹಲ್ಲೆ ನಡೆಸಿದ ಘಟನೆ ಬುಧವಾರ ರಾತ್ರಿ ನಡೆದಿದೆ.
ಉಜಿರೆಯಿಂದ ಧರ್ಮಸ್ಥಳ ಬಸ್ ನಿಲ್ದಾಣಕ್ಕೆ ರಾತ್ರಿ ಸುಮಾರು 9 ಗಂಟೆಗೆ ಡ್ರಾಪ್ ಮಾಡಿ ಹೊರಡುವಾಗ ಆಶಿಕ್ ಮೇಲೆ ಯುವಕರು ಬೆದರಿಕೆ ಹಾಕಿ ಹಲ್ಲೆ ನಡೆಸಿದ್ದಾರೆ.
ಮಾರಣಾಂತಿಕ ಹಲ್ಲೆಗೊಳಗಾದ ಮುಹಮ್ಮದ್ ಆಶಿಕ್ ಅವರನ್ನು ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.