ರಾಹುಲ್ ಗಾಂಧಿಗೆ ಬಿಗ್ ರಿಲೀಫ್ ನೀಡಿದ ಸುಪ್ರೀಂ ಕೋರ್ಟ್
ಮೋದಿ ಉಪನಾಮ ಟೀಕೆಗೆ ಸಂಬಂಧಿಸಿದಂತೆ ಮಾನನಷ್ಟ ಮೊಕದ್ದಮೆಯಲ್ಲಿ ಶಿಕ್ಷೆಯನ್ನು ತಡೆಹಿಡಿಯಲು ನಿರಾಕರಿಸಿದ ಗುಜರಾತ್ ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸಲ್ಲಿಸಿದ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ಶಿಕ್ಷೆಗೆ ಮಧ್ಯಂತರ ತಡೆ ನೀಡಿ ಮಹತ್ವದ ಆದೇಶ ಹೊರಡಿಸಿದೆ.

ಗುಜರಾತ್ ಸರ್ಕಾರದ ಮಾಜಿ ಸಚಿವ ಪೂರ್ಣೇಶ್ ಮೋದಿ ಅವರು 2019 ರಲ್ಲಿ ರಾಹುಲ್ ಗಾಂಧಿ ವಿರುದ್ಧ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ಹೂಡಿದ್ದರು. ಏಪ್ರಿಲ್ 13, 2019 ರಂದು ಕರ್ನಾಟಕದ ಕೋಲಾರದಲ್ಲಿ ಚುನಾವಣಾ ರ್ಯಾಲಿಯಲ್ಲಿ ರಾಹುಲ್ ಗಾಂಧಿ, ಎಲ್ಲ ಕಳ್ಳರ ಸರ್ನೇಮ್ ಮೋದಿ ಎಂದೇ ಯಾಕಿದೆ? ಎಂದು ಕೇಳಿದ್ದರು. ಈ ಹೇಳಿಕೆಯಿಂದ ರಾಹುಲ್ ಮೋದಿ ಹೆಸರಿರುವವರನ್ನು ಅವಮಾನಿಸಿದ್ದಾರೆ ಎಂದು ಪೂರ್ಣೇಶ್ ಮೋದಿ ದೂರಿದ್ದರು.