ಕರಾವಳಿ

ಬೆಳ್ಳಾರೆ ಝಕರಿಯಾ ಜುಮಾ ಮಸೀದಿ ಆಡಳಿತ ಮಂಡಳಿಗೆ ಚುನಾವಣೆ-ವೇಳಾ ಪಟ್ಟಿ ಪ್ರಕಟ



ಪುತ್ತೂರು: ಝಕರಿಯಾ ಜುಮಾ ಮಸೀದಿ ಬೆಳ್ಳಾರೆ ಇದರ ಆಡಳಿತ ಮಂಡಳಿಗೆ ಚುನಾವಣೆಯ ವೇಳಾ ಪಟ್ಟಿ ಪ್ರಕಟಗೊಂಡಿದೆ.

ಆ.4ರಂದು ಚುನಾವಣಾ ಅಧಿಸೂಚನೆ ಪ್ರಕಟಗೊಂಡಿದ್ದು ಆ.8ರಿಂದ ಆ.17ರ ವರೆಗೆ ಪೂರ್ವಾಹ್ನ ಗಂಟೆ 11ರಿಂದ ಅಪರಾಹ್ನ ಗಂಟೆ 2ರ ವರೆಗೆ ನಾಮಪತ್ರ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಆ.23ರಂದು ನಾಮಪತ್ರ ಪರಿಶೀಲನೆ ನಡೆಯಲಿದ್ದು ಆ.28 ಹಾಗೂ ಆ.29ರಂದು ಪೂರ್ವಾಹ್ನ ಗಂಟೆ 11ರಿಂದ ಅಪರಾಹ್ನ ಗಂಟೆ 1.30ರ ವರೆಗೆ ನಾಮಪತ್ರ ಹಿಂಪಡೆಯಲು ಅವಕಾಶ ನೀಡಲಾಗಿದೆ.

ಆ.31ರಂದು  ಅಪರಾಹ್ನ ಗಂಟೆ 5-00ಕ್ಕೆ ಚುನಾವಣಾ ಕಣದಲ್ಲಿರುವ ಅಭ್ಯರ್ಥಿಗಳ ಅಂತಿಮ ಪಟ್ಟಿ ಪ್ರಕಟಿಸಿ ಚಿಹ್ನೆ ಹಂಚಿಕೆ ಮಾಡಲಾಗುತ್ತದೆ. ಮತದಾನ ಅವಶ್ಯವಿದ್ದಲ್ಲಿ ಸೆ.9ರಂದು ಪೂವಾಹ್ನ 8 ಗಂಟೆಯಿಂದ ಅಪರಾಹ್ನ 3 ಗಂಟೆಯ ವರೆಗೆ ಮತದಾನ ನಡೆಯಲಿದ್ದು ಅಂದೇ ಸಂಜೆ ಗಂಟೆ ೪ರಿಂದ ಮತ ಎಣಿಕೆ ನಡೆದು ಚುನಾವಣಾ ಫಲಿತಾಂಶ ಘೋಷಣೆಯಾಗಲಿದೆ ಎಂದು ಚುನಾವಣಾಧಿಕಾರಿ ಎಂ ಅಬೂಬಕ್ಕರ್ ತಿಳಿಸಿದ್ದಾರೆ. 

Leave a Reply

Your email address will not be published. Required fields are marked *

error: Content is protected !!