ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ- ಮುನಿಯಪ್ಪ
ಬೆಂಗಳೂರು: ಸರ್ಕಾರ ಹಸಿದವರಿಗೆ ಅನ್ನ ಸಿಗಲಿ ಎಂಬ ಉದ್ದೇಶದಿಂದ ‘ಅನ್ನಭಾಗ್ಯ’ ಯೋಜನೆ ಜಾರಿಗೊಳಿಸಿದೆ. ಈವರೆಗೆ ಒಂದು ಕೋಟಿ ಮಂದಿಗೆ ಅಕ್ಕಿಯ ಹಣ ಜಮೆ ಮಾಡಲಾಗಿದೆ. ಮುಖ್ಯವಾಗಿ ನೀತಿ ಸಂಹಿತೆ ಹಿನ್ನೆಲೆ ಸ್ಥಗಿತಗೊಂಡಿದ್ದ ಪಡಿತರ ಚೀಟಿ/ರೇಷನ್ ಕಾರ್ಡ (Ration Card) ವಿತರಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಆಹಾರ ಸಚಿವ ಕೆಎಚ್ ಮುನಿಯಪ್ಪ ತಿಳಿಸಿದರು.
ಸದ್ಯ ಅಕ್ಕಿ ಬದಲಿಗೆ ಹಣ ನೀಡಲಾಗುತ್ತಿದೆ. ಮುಂದಿನ ದಿನಗಳಲ್ಲಿ ಆದಷ್ಟು ಶೀಘ್ರವೇ ಹಣದ ಬದಲು ಘೋಷಿಸಿದಂತೆ ತಲಾ ಹತ್ತು ಕೆ.ಜಿ ಅಕ್ಕಿ ನೀಡಲಾಗುವುದು ಎಂದು ಅವರು ತಿಳಿಸಿದ್ದಾರೆ.
ಹೊಸದಾಗಿ ಪಡಿತರ ಕಾರ್ಡ್ ವಿತರಣೆಗೆ ಸೂಚಿಸಲಾಗಿದೆ. ಬಿಪಿಎಲ್, ಎಪಿಎಲ್ ಕಾರ್ಡ್‌ಗೆ ಅರ್ಜಿ ಸಲ್ಲಿಸುವವರು ಸಲ್ಲಿಸಬಹುದು. ನೀತಿ ಸಂಹಿತೆ ಜಾರಿಯಲ್ಲಿರುವ ಹಿನ್ನೆಲೆ ರೇಷನ್ ಕಾರ್ಡ್ ವಿತರಣೆ ಸ್ಥಗಿತಗೊಳಿಲಾಗಿತ್ತು. ಇದೀಗ ಮತ್ತೆ ಆರಂಭವಾಗಿದ್ದು, ಹೊಸ ಸದಸ್ಯರ ಸೇರ್ಪಡೆಯನ್ನು ಪಡಿತರ ಕಾರ್ಡ್‌ಗೆ ಸೇರಿಸಲೂ ಅವಕಾಶ ನೀಡಲಾಗಿದೆ ಎಂದರು.
ರಾಜ್ಯದ ಬಡವರಿಗೆ ತಲಾ ಹತ್ತು ಅಕ್ಕಿ ಕೊಡುವು ಸಂಬಂಧ ‘ಅನ್ನಭಾಗ್ಯ’ ಯೋಜನೆ ಗ್ಯಾರಂಟಿ ಘೋಷಿಸಲಾಗಿದೆ. ಈವರೆಗೆ ಒಟ್ಟು ಒಂದು ಕೋಟಿ ಕುಟುಂಬಗಳಿಗೆ ಹೆಚ್ಚುವರಿ ಅಕ್ಕಿ ಬದಲಾಗಿ ತಲಾ ಇಂತಿಷ್ಟು ಹಣ ಎಂದು ಒಟ್ಟು ಸುಮಾರು 556 ಕೋಟಿ ಹಣ ಅವರ ಖಾತೆಗೆ ಜಮೆ ಮಾಡಲಾಗಿದೆ. ಸದ್ಯ ಇದರಿಂದ 3.50 ಕೋಟಿ ಪ್ರಯೋಜನ ಆಗುತ್ತಿದೆ ಎಂದು ಅವರು ವಿವರಿಸಿದರು.
ಅನ್ನ ಭಾಗ್ಯ ಯೋಜನೆಯಡಿ ಅಕ್ಕಿ ವಿತರಣೆಗೆ ಆಂಧ್ರಪ್ರದೇಶ ಮತ್ತು ತೆಲಂಗಾಣ ಸರ್ಕಾರ ಅಕ್ಕಿ ನೀಡಲು ಮುಂದೆ ಬಂದಿವೆ. ಆಹಾರ ನಿಗಮದ ದರದಲ್ಲಿ ಅಕ್ಕಿ ನೀಡುವಂತೆ ಮನವಿ ಮಾಡಿದ್ದಾರೆ. ಈ ಕುರಿತು ಮುಂದಿನ ಒಂದು ವಾರದಲ್ಲಿ ಆ ಸರ್ಕಾರದಗಳ ಅಧಿಕಾರಿಗಳು ಅಂತಿಮ ನಿರ್ಧಾರ ತಿಳಿಸಲಿದ್ದಾರೆ. ಸೆಪ್ಟೆಂಬರ್ ನಲ್ಲಿ ಅನ್ನಭಾಗ್ಯ ಯೋಜನೆ ಜಾರಿಯಾಗುವ ಸಾಧ್ಯತೆ ಇದೆ ಎಂದು ತಿಳಿಸಿದರು.
ಇನ್ನೂ ಯಾರಾದರೂ ಸ್ವಂತ ಬಳಕೆಗೆಂದು ವೈಟ್ ಬೋರ್ಡ್ ಕಾರು ಹೊಂದಿದಲ್ಲಿ ಅವರಿಗೆ ಬಿಪಿಎಲ್ ಕಾರ್ಡ್ ನೀಡಲಾಗುವುದಿಲ್ಲ. ಯೆಲ್ಲೋ ಬೋರ್ಡ್ ಕಾರು ಇರುವವರಿಗೆ ಬಿಪಿಎಲ್ ಕಾರ್ಡ್ ನೀಡಲಾಗುವುದು. ಇನ್ನೂ ಈ ಕುರಿತು ಹೆಚ್ಚಿನ ಚರ್ಚೆ ನಡೆಸಿ ನಿರ್ಧರಿಸಲಾಗುವುದು ಎಂದರು.
ಇನ್ನೂ ಯಾರಾದರೂ ಸ್ವಂತ ಬಳಕೆಗೆಂದು ವೈಟ್ ಬೋರ್ಡ್ ಕಾರು ಹೊಂದಿದಲ್ಲಿ ಅವರಿಗೆ ಬಿಪಿಎಲ್ ಕಾರ್ಡ್ ನೀಡಲಾಗುವುದಿಲ್ಲ. ಯೆಲ್ಲೋ ಬೋರ್ಡ್ ಕಾರು ಇರುವವರಿಗೆ ಬಿಪಿಎಲ್ ಕಾರ್ಡ್ ನೀಡಲಾಗುವುದು. ಇನ್ನೂ ಈ ಕುರಿತು ಹೆಚ್ಚಿನ ಚರ್ಚೆ ನಡೆಸಿ ನಿರ್ಧರಿಸಲಾಗುವುದು ಎಂದು ಮುನಿಯಪ್ಪ ತಿಳಿಸಿದ್ದಾರೆ.